ಸ್ನೇಹ ಬೆಳೆಸಲು ನಿರಾಕರಿಸಿದಕ್ಕೆ ಮಾಡೆಲ್ Murder – ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್ ಪರಾರಿ

ಸ್ನೇಹ ಬೆಳೆಸಲು ನಿರಾಕರಿಸಿದ್ದಕ್ಕೆ ಮಾಡೆಲ್ ಯುವತಿಯನ್ನು ಜಿಮ್ ಟ್ರೇನರ್ವೊಬ್ಬರು ಮನೆಗೆ ನುಗ್ಗಿ ಹತ್ಯೆ ಮಾಡಿರುವ ಘಟನೆ ದೆಹಲಿಯ ತಿಲಕ್ ನಗರದಲ್ಲಿ ನಡೆದಿದೆ. ಮೃತ ಯುವತಿಯನ್ನು 21 ವರ್ಷದ ಮುಸ್ಕಾನ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಇಮ್ರಾನ್ ಎಂದು ಗುರುತಿಸಲಾಗಿದ್ದು, ಆತ ಜಿಮ್ ಟ್ರೇನರ್ ಆಗಿದ್ದ.
ಆಗಿದ್ದೇನು?
ಮುಸ್ಕಾನ್ ಜಿಮ್ಗೆ ತೆರಳುತ್ತಿದ್ದ ವೇಳೆ ಇಮ್ರಾನ್ ಪರಿಚಯವಾಗಿದ್ದ. ಪರಿಚಯವಾದ ಬಳಿಕ ಆತ ಮುಸ್ಕಾನ್ ಜೊತೆ ಸ್ನೇಹ ಬೆಳೆಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದ ಎನ್ನಲಾಗಿದೆ. ಆದರೆ, ಆಕೆ ಇದಕ್ಕೆ ನಿರಾಕರಿಸಿದ್ದಳು ಎಂದು ತಿಳಿದುಬಂದಿದೆ. ಇನ್ನು ಈ ಘಟನೆ ನಡೆದ ವೇಳೆ ಮುಸ್ಕಾನ್ ಮನೆಯಲ್ಲಿ ಒಬ್ಬಳೇ ಇದ್ದಳು ಎನ್ನಲಾಗಿದ್ದು, ಈ ಸಂದರ್ಭವನ್ನು ಗಮನಿಸಿಕೊಂಡು ಇಮ್ರಾನ್ ಮನೆಗೆ ನುಗ್ಗಿ ಆಕೆಯ ಮೇಲೆ ದಾಳಿ ನಡೆಸಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
READ THIS : ನಾಯಿ ಮೂತ್ರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

Murder – ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಆರೋಪಿಯ ಚಲನವಲನ ಪತ್ತೆಹಚ್ಚಲು ಹಾಗೂ ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.
Murder ಗೆ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

MUST WATCH : 5 ದಶಕದ ರಸ್ತೆ ಏಕಾಏಕಿ ಬಂದ್ – ಗ್ರಾಮಸ್ಥರಿಂದ ತಹಶೀಲ್ದಾರ್ಗೆ ದೂರು




