
RAIN ALERT : ರಾಜ್ಯದಲ್ಲಿ ಮತ್ತೆ ಮುಂಗಾರು ಆರ್ಭಟ – ಬೆಂಗಳೂರು ಸೇರಿ ಈ 6 ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ!
ರಾಜ್ಯದಲ್ಲಿ ನೈಋತ್ಯ ಮುಂಗಾರು ಚಟುವಟಿಕೆ ದುರ್ಬಲಗೊಂಡಿದ್ದು, ಬಹುತೇಕ ಕಡೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿದಿದೆ. ಆದ್ರೆ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯ ಸಾಧ್ಯತೆ ಕುರಿತು ವರದಿಗಳು ಪ್ರಕಟವಾಗಿವೆ. ವಿಶೇಷವಾಗಿ ಅಕ್ಟೋಬರ್ 9ರಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
READ THIS : ಮುಂದಿನ ಮೂರು ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಆದ್ರೆ ಅಕ್ಟೋಬರ್ 8ರಂದು ಪ್ರಕಟವಾದ ಅಧಿಕೃತ IMD ಎಚ್ಚರಿಕೆ ಪಟ್ಟಿಯಲ್ಲಿ ಅಕ್ಟೋಬರ್ 9ಕ್ಕೆ ದಕ್ಷಿಣ ಒಳನಾಡಿಗೆ ಯಾವುದೇ ಪ್ರತ್ಯೇಕ ಎಚ್ಚರಿಕೆ ನೀಡಿಲ್ಲ.

RAIN ALERT – ಹಲವು ಜಿಲ್ಲೆಗಳಲ್ಲಿ ಒಣಹವೆ
ಇನ್ನು ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಯ ಕೆಲವೆಡೆ ಹಾಗೂ ಹಾಸನ, ಕೊಡಗು, ಚಿಕ್ಕಮಗಳೂರು ಭಾಗಗಳಲ್ಲಿ ಸ್ಥಳೀಯವಾಗಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.
MUST WATCH : VIJAYALAKSHMI DARSHANಗೆ SHOCK ಕೊಟ್ಟ ಸುಪ್ರೀಂ ಕೋರ್ಟ್..!





