ಜೈಲಲ್ಲಿ ಸೊಳ್ಳೆ ಕಾಟಕ್ಕೆ ಮುಕ್ತಿ ಕೊಡಿ : ನಟ Darshan ಮನವಿಗೆ ಡೋಂಟ್ ಕೇರ್ ಎಂದ ಅಲೋಕ್ ಕುಮಾರ್!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸೊಳ್ಳೆಗಳ ಕಾಟ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಸೊಳ್ಳೆಗಳ ಕಾಟದಿಂದ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ದರ್ಶನ್ ಜೈಲು ಅಧಿಕಾರಿಗಳ ಬಳಿ ಅಳಲು ತೋಡಿಕೊಂಡಿದ್ದಾರೆ.

ನಟ ದರ್ಶನ್ಗೆ ಸೊಳ್ಳೆ ಕಾಟದ ಕಿರಿಕಿರಿ
ಇತ್ತೀಚೆಗೆ ರಾಜ್ಯ ಜೈಲುಗಳ ಮಹಾನಿರ್ದೇಶಕರಾದ (ಡಿಜಿಪಿ) ಅಲೋಕ್ ಕುಮಾರ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಪರಿಶೀಲನೆಗಾಗಿ ಭೇಟಿ ನೀಡಿದ್ದರು. ಈ ವೇಳೆ ನಟ ದರ್ಶನ್, ‘ಜೈಲಿನಲ್ಲಿ ಸೊಳ್ಳೆಗಳ ಕಾಟ ವಿಪರೀತವಾಗಿದೆ. ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ, ಇದಕ್ಕೆ ಏನಾದರೂ ಪರಿಹಾರ ಮಾಡಿ’ ಎಂದು ಅವರಿಗೆ ಮನವಿ ಮಾಡಿದ್ದಾರೆ.
ಇದನ್ನು ಓದಿ : ಜನವರಿಯಲ್ಲಿ ಜೈಲಿನಿಂದ ಹೊರಗೆ ಬರ್ತಾರೆ ನಟ ದರ್ಶನ್..!

Darshan ಮನವಿಗೆ ಡೋಂಟ್ ಕೇರ್ ಎಂದ ಅಲೋಕ್ ಕುಮಾರ್!
ಆದರೆ ದರ್ಶನ್ ಅವರ ಮನವಿಗೆ ಡಿಜಿಪಿ ಅಲೋಕ್ ಕುಮಾರ್ ಅವರು ಜೈಲು ನಿಯಮಾವಳಿಯನ್ನು ಉಲ್ಲೇಖಿಸಿ ಸ್ಪಷ್ಟ ಉತ್ತರ ನೀಡಿದ್ದಾರೆ ಎನ್ನಲಾಗಿದೆ. ಜೈಲು ಮ್ಯಾನ್ಯುವಲ್ ಪ್ರಕಾರ ಬಂದಿಗಳಿಗೆ ಒದಗಿಸಬೇಕಾದ ಸೌಲಭ್ಯಗಳನ್ನು ಮಾತ್ರ ನೀಡಲು ಸಾಧ್ಯ. ಮ್ಯಾನ್ಯುವಲ್ನಲ್ಲಿ ಇಲ್ಲದ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ನಾನೇನು ಮಾಡೋಕೆ ಆಗಲ್ಲ ಎಂದ ಡಿಜಿಪಿ
ಜೈಲು ನಿಯಮಾವಳಿ ಪ್ರಕಾರ ಏನಾದರೂ ಸಮಸ್ಯೆಗಳಿದ್ದರೆ ಹೇಳಿ, ಸೌಲಭ್ಯ ಒದಗಿಸುತ್ತೇವೆ. ಅದನ್ನು ಹೊರತುಪಡಿಸಿ ಸೊಳ್ಳೆಗಳ ಬಗ್ಗೆ ನಾವೇನು ಮಾಡಲು ಆಗುವುದಿಲ್ಲ’ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಇದನ್ನು ನೋಡಿ : ಮಹಿಳೆ ಜೊತೆ ಸ್ವಾಮೀಜಿ ಅಸಭ್ಯ ವರ್ತನೆ ಆರೋಪ | ಸ್ವಾಮೀಜಿಗೆ ಹಿಗ್ಗಾಮುಗ್ಗಾ ಥಳಿತ




