Bengaluru ವೈಟ್ಫೀಲ್ಡ್ನಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದ ಮಹಿಳೆ ಮೇಲೆ ಶಾಲಾ ಬಸ್ ಹರಿದ ಪರಿಣಾಮ ತಾಯಿ ಮೃತಪಟ್ಟಿದ್ದಾರೆ. ಮಗಳು ಅದೃಷ್ಟವಶಾತ್ ಪಾರಾಗಿದ್ದು, ಪ್ರಕರಣ ದಾಖಲಾಗಿದೆ.

ರಾಜಧಾನಿ Bengaluru ನಲ್ಲಿ ಮನಕಲಕುವ ರಸ್ತೆ ಅಪಘಾತ ಸಂಭವಿಸಿದ್ದು, ಮಗಳನ್ನು ಕಾಲೇಜಿಗೆ ಕರೆದುಕೊಂಡು ಹೋಗುತ್ತಿದ್ದ ತಾಯಿ ಶಾಲಾ ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದುರಂತ ವೈಟ್ಫೀಲ್ಡ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಮಾಹಿತಿಯ ಪ್ರಕಾರ, ಕಾಂತಾ ಎಂಬ ಮಹಿಳೆ ತನ್ನ ಪುತ್ರಿ ನೇಹಾಳನ್ನು ಬೈಕ್ನಲ್ಲಿ ಕಾಲೇಜಿಗೆ ಕರೆದೊಯ್ಯುತ್ತಿದ್ದರು. ಮಾರತಹಳ್ಳಿಯಿಂದ ಸಿದ್ದಾಪುರ ಕಡೆಗೆ ತೆರಳುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿದ್ದು, ಕಾಂತಾ ರಸ್ತೆಯ ಮೇಲೆ ಬಿದ್ದಿದ್ದಾರೆ.

ಅದೇ ಸಮಯದಲ್ಲಿ ಹಿಂದಿನಿಂದ ಬಂದ ಶಾಲಾ ಬಸ್ ಏಕಾಏಕಿ ಮಹಿಳೆಯ ಮೇಲೆ ಹರಿದಿದೆ. ಅಪಘಾತದ ತೀವ್ರತೆಗೆ ಕಾಂತಾ ಸ್ಥಳದಲ್ಲೇ ಮೃತಪಟ್ಟಿದ್ದು, ಪುತ್ರಿ ನೇಹಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ತಾಯಿಯ ಸಾವನ್ನು ಕಣ್ಣಾರೆ ಕಂಡ ನೇಹಾ ತೀವ್ರ ಆಘಾತಕ್ಕೊಳಗಾಗಿದ್ದಾರೆ ಎಂದು ತಿಳಿದುಬಂದಿದೆ.
MUST READ : Dharmasthala ಕ್ಕೆ ಹೊಸ ಟೂರ್ ಪ್ಯಾಕೇಜ್ ಪರಿಚಯಿಸಿದ KSTDC..!!

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವೈಟ್ಫೀಲ್ಡ್ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಬೈಕ್ ಸ್ಕಿಡ್ ಆದ ಬಳಿಕ ಈ ದುರಂತ ಸಂಭವಿಸಿದ್ದು, ಅಪಘಾತದ ನಿಖರ ಕಾರಣವನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಈ ಘಟನೆ ಬೆಂಗಳೂರಿನಲ್ಲಿ ರಸ್ತೆ ಸುರಕ್ಷತೆ ಮತ್ತು ಭಾರೀ ವಾಹನಗಳ ಸಂಚಾರದ ವೇಳೆ ಎಚ್ಚರಿಕೆಯ ಅಗತ್ಯವನ್ನು ಮತ್ತೊಮ್ಮೆ ನೆನಪಿಸಿದೆ.
MUST WATCH : ಜಮೀರ್ಗೆ ತಪ್ಪಿದ ಸಚಿವ ಸ್ಥಾನ ತಿಪಟೂರಿನಲ್ಲಿ ಬೃಹತ್ ಪ್ರತಿಭಟನೆ




