
ಸುಪಾರಿ ಕೊಟ್ಟು ಪತಿಯ Murder – ಪತ್ನಿ, ಪ್ರಿಯಕರ ಸೇರಿ ಮೂವರು ಅರೆಸ್ಟ್!
ಪ್ರಿಯಕರ ಜೊತೆ ಸೇರಿ ಮಹಿಳೆಯೊಬ್ಬಳು ತನ್ನ ಪತಿಯನ್ನೇ ಹತ್ಯೆ ಮಾಡಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೊಣೆಹಳ್ಳಿ ಹೊಸೂರು ಗ್ರಾಮದಲ್ಲಿ ನಡೆದಿದೆ. ಬಸವರಾಜ್ (37) ಕೊಲೆಯಾದ ವ್ಯಕ್ತಿ. ಅವರ ಪತ್ನಿ ಸುನೀತಾ ಹಾಗೂ ಬೆಣ್ಣೆಹಳ್ಳಿ ಗ್ರಾಮದ ತಿಪ್ಪೇಸ್ವಾಮಿ ಆರೋಪಿಗಳಾಗಿದ್ದಾರೆ.
ಪತಿಯನ್ನೇ ಸುಪಾರಿ ಕೊಟ್ಟು ಹತ್ಯೆ!
ಪೊಲೀಸರ ತನಿಖೆಯ ಪ್ರಕಾರ, ಸುನೀತಾ ಹಾಗೂ ತಿಪ್ಪೇಸ್ವಾಮಿ ನಡುವೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದೆ. ಈ ವಿಚಾರ ಬಸವರಾಜ್ಗೆ ತಿಳಿದು ಮನೆಯಲ್ಲಿ ಗಲಾಟೆ ನಡೆದಿತ್ತು. ಬಳಿಕ ಇಬ್ಬರೂ ಸೇರಿ ಬಸವರಾಜ್ ಅವರನ್ನು ಹತ್ಯೆ ಮಾಡಲು ನಿರ್ಧರಿಸಿ, ಹಂತಕರಿಗೆ ₹2 ಲಕ್ಷ ಸುಪಾರಿ ನೀಡಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
READ THIS : 7ನೇ ಮಹಡಿಯಿಂದ ಜಿಗಿದ ಪ್ರೇಮಿಗಳು – ಪ್ರಿಯತಮೆ ಸಾವು, ಪ್ರಿಯಕರನ ಸ್ಥಿತಿ ಗಂಭೀರ!

ಪತಿ ನಾಪತ್ತೆಯಾಗಿದ್ದಾರೆ ಎಂದು ಸಳ್ಳು ದೂರು
ಬಸವರಾಜ್ಗೆ ಸಾಲ ಕೊಡಿಸುವುದಾಗಿ ನಂಬಿಸಿ ದೊಣೆಹಳ್ಳಿ ಕ್ರಾಸ್ನಿಂದ ಕಾರಿನಲ್ಲಿ ಕರೆದೊಯ್ದ ಆರೋಪಿಗಳು, ಬಳಿಕ ಅವರನ್ನು Murder ಮಾಡಿದ್ದಾರೆ ಎನ್ನಲಾಗಿದೆ. ಇತ್ತ ಪತಿ ನಾಪತ್ತೆಯಾಗಿದ್ದಾರೆ ಎಂದು ಸುನೀತಾ ಪೊಲೀಸರಿಗೆ ದೂರು ನೀಡಿದ್ದಳು. ಆದರೆ, ತಾಂತ್ರಿಕ ಸಾಕ್ಷ್ಯಗಳು ಹಾಗೂ ವಿಚಾರಣೆ ವೇಳೆ ಪ್ರಕರಣದ ಹಿಂದಿನ ಸತ್ಯ ಬಯಲಾಗಿದೆ.
ಓರ್ವನ ಬಂಧನ – ಮತ್ತಿಬ್ಬರಿಗಾಗಿ ಹುಡುಕಾಟ
ಪ್ರಕರಣಕ್ಕೆ ಸಂಬಂಧಿಸಿದಂತೆ ಓಂಕಾರಪ್ಪ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಜಗಳೂರು ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

MUST WATCH : ಬಾಲ ಗೊರವಪ್ಪಜ್ಜನ ಭರ್ಜರಿ ಸಾಹಸ – ಕಬ್ಬಿಣದ ಸರಪಳಿ ಹರಿದು ಅಚ್ಚರಿ.!




