ಬೆಂಗಳೂರಿನಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು: ಪತ್ನಿ ವಶಕ್ಕೆ, Murder ಶಂಕೆ

ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ ಮಗ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು 38 ವರ್ಷದ ಅಭಿನವ್ ಹಾಗೂ ಅವರ 5 ವರ್ಷದ ಪುತ್ರ ಯದುವೀರ್ ಎಂದು ಗುರುತಿಸಲಾಗಿದೆ.
ಕೊಲೆ ಶಂಕೆ
ಮೇಲ್ನೋಟಕ್ಕೆ ಇಬ್ಬರ ಸಾವಿನ ಹಿಂದೆಯೂ ಕೊಲೆ ಶಂಕೆ ವ್ಯಕ್ತವಾಗಿದ್ದು, ಮೃತದೇಹಗಳ ಮೇಲೆ ಗಾಯದ ಗುರುತುಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಇದನ್ನು ಓದಿ : ದಪ್ಪ ಇದ್ದಾಳೆಂದು ಪತ್ನಿಯನ್ನೇ ಕೊಲೆಗೈದ ಪಾಪಿ ಪತಿ.!

ಹೆಂಡ್ತಿಯೇ ಗಂಡ-ಮಗನನ್ನ ಕೊಂದಳಾ?
ಘಟನೆ ನಡೆದ ವೇಳೆ ಅಭಿನವ್ ಅವರ ಪತ್ನಿ ಪಕ್ಕದ ಕೊಠಡಿಯಲ್ಲಿದ್ದರು ಎನ್ನಲಾಗಿದ್ದು, ಈ ವಿಚಾರವೂ ಪೊಲೀಸರ ಅನುಮಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮೃತರ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಕರಣ ದಾಖಲು
ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಬಾಣವಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಂದೆ-ಮಗನ ಸಾವಿಗೆ ನಿಖರ ಕಾರಣವೇನು, ಘಟನೆ ಹೇಗೆ ನಡೆದಿದೆ ಹಾಗೂ ಸಾವಿನ ಹಿಂದೆ ಯಾರಾದರೂ ಕೈವಾಡವಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇನ್ನು ಘಟನೆ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ನೋಡಿ : ತಿಪಟೂರು ಜಿಲ್ಲೆಗಾಗಿ ಮಂತ್ರಿಗಿರಿ ತ್ಯಾಗ ಮಾಡಿದ್ರಾ ಶಾಸಕ ಷಡಕ್ಷರಿ.?




