
ಡಿವೋರ್ಸ್ ಕೇಳಿದ್ದಕ್ಕೆ ಪತ್ನಿಯ ಬರ್ಬರ MURDER – ಹಂತಕನಿಗಾಗಿ ತೀವ್ರ ಶೋಧ
ವಿಚ್ಛೇದನ ಕೇಳಿದ್ದಕ್ಕೆ ಸಿಟ್ಟಿಗೆದ್ದ ಪತಿಯೊಬ್ಬ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅಮಟೂರ ಗ್ರಾಮದಲ್ಲಿ ನಡೆದಿದೆ.
ಆರೋಪಿ ಎಸ್ಕೇಪ್!
ಕೊಲೆಯಾದ ಮಹಿಳೆಯನ್ನು ಬೈಲಹೊಂಗಲದ ಗೊಲ್ಲರ ಓಣಿ ನಿವಾಸಿ ಲಕ್ಷ್ಮಿ ಮಾಡಮಗೇರಿ (31) ಎಂದು ಗುರುತಿಸಲಾಗಿದೆ. ಪತಿ ರಾಜು ಮಾಡಮಗೇರಿ ಕೊಲೆ ಆರೋಪಿಯಾಗಿದ್ದು, ಸದ್ಯ ಪರಾರಿಯಾಗಿದ್ದಾನೆ.
READ THIS : ಕತ್ತು ಹಿಸುಕಿ ಗಂಡನಿಂದಲೇ ಹೆಂಡತಿಯ ಕೊಲೆ – ಆಗಿದ್ದೇನು?

ಆಗಿದ್ದೇನು?
ಐದು ವರ್ಷಗಳ ಹಿಂದೆ ರಾಜು ಮತ್ತು ಲಕ್ಷ್ಮಿ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಕಳೆದ ಎರಡು ವರ್ಷಗಳಿಂದ ದಂಪತಿ ನಡುವೆ ಮನಸ್ತಾಪ ಉಂಟಾಗಿತ್ತು. ಇದೇ ಕಾರಣಕ್ಕೆ ಲಕ್ಷ್ಮಿ ಪತಿಯಿಂದ ವಿಚ್ಛೇದನ ಕೇಳಿದ್ದರು ಎಂದು ತಿಳಿದುಬಂದಿದೆ.
ಪತ್ನಿ ವಿಚ್ಛೇದನ ಕೇಳಿದ್ದಕ್ಕೆ ರಾಜು ಕೋಪಗೊಂಡಿದ್ದ ಎನ್ನಲಾಗಿದ್ದು, ಆಕೆಯನ್ನು MURDER ಮಾಡಲು ಸಂಚು ರೂಪಿಸಿದ್ದ ಎಂದು ಆರೋಪಿಸಲಾಗಿದೆ. ಪತ್ನಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಬರುತ್ತಿದ್ದ ವೇಳೆ, ಮನೆಗೆ ಡ್ರಾಪ್ ಮಾಡುವುದಾಗಿ ಹೇಳಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಹಂತಕನಿಗಾಗಿ ತೀವ್ರ ಶೋಧ
ಘಟನೆಯ ಬಳಿಕ ಆರೋಪಿ ರಾಜು ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಬೈಲಹೊಂಗಲ ಠಾಣೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

MUST WATCH : ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು – ಹೆದ್ದಾರಿ ಬಂದ್ ಮಾಡಿದ ಮಹಿಳೆಯರು




