ಸಾಂಸ್ಕೃತಿಕ ನಗರಿ Mysore ನಲ್ಲಿ ಭೀಕರ ಅಗ್ನಿ ಅವಘಡ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಬೆಂಕಿ ದುರಂತದಲ್ಲಿ ಇಬ್ಬರು ಸಜೀವ ದಹನವಾಗಿದ್ದರೆ, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪಬ್ನಲ್ಲಿ ಆಕಸ್ಮಿಕ ಬೆಂಕಿಯಿಂದ ಇಬ್ಬರ ಸಜೀವ ದಹನ
Mysore ನ ದಟ್ಟಗಳ್ಳಿ 4ನೇ ಹಂತದ ಸಮೀಪವಿರುವ ಪಬ್ನಲ್ಲಿ ಈ ದುರಂತ ಸಂಭವಿಸಿದೆ. ಎಂದಿನಂತೆ ಗ್ರಾಹಕರು ಹಾಗೂ ಸಿಬ್ಬಂದಿ ಪಬ್ನಲ್ಲಿದ್ದ ವೇಳೆ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಇಡೀ ಕಟ್ಟಡವನ್ನು ಜ್ವಾಲೆ ಆವರಿಸಿಕೊಂಡಿದೆ.
ಇದನ್ನು ಓದಿ : ಬಸ್ ದುರಂತದಲ್ಲಿ 22 ಸಜೀವ ದಹನ! 6 ಪ್ರಯಾಣಿಕರ ಪ್ರಾಣ ಉಳಿಸಿದ ನವೀನ್

ಪಬ್ನಲ್ಲಿ ಕೆಲಸ ಮಾಡುತ್ತಿದ್ದ ಶಾಹಿಲ್, ಪ್ರಕಾಶ್ ಸಾವು
ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಪಬ್ನಲ್ಲಿದ್ದವರು ಹೊರಗೆ ಬರಲು ಹರಸಾಹಸ ಪಟ್ಟಿದ್ದಾರೆ. ಕೆಲವರು ಸುರಕ್ಷಿತವಾಗಿ ಹೊರಬಂದಿದ್ದು, ಪಬ್ನಲ್ಲಿ ಕೆಲಸ ಮಾಡುತ್ತಿದ್ದ ಶಾಹಿಲ್, ಪ್ರಕಾಶ್ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಏಳು ಮಂದಿಯನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಗಾಯಾಳುಗಳಿಗೆ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.
ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು?
ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ಅಥವಾ ಇತರೆ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಇದನ್ನು ನೋಡಿ : ಜಮೀರ್ಗೆ ಡಿಸಿಎಂ ಸ್ಥಾನ ಕೊಡುವಂತೆ ಪಟ್ಟು – ಪಾದರಾಯನಪುರದಲ್ಲಿ ರೊಚ್ಚಿಗೆದ್ದ ಬೆಂಬಲಿಗರು




