Vijayapura ಜಿಲ್ಲೆಯ ಮಮದಾಪೂರ ಗ್ರಾಮದಲ್ಲಿ ಪಾನ್ ಶಾಪ್ನಲ್ಲಿ ನಿಗೂಢ ಸ್ಫೋಟ ಸಂಭವಿಸಿ ಮೂವರು ಗಾಯಗೊಂಡಿದ್ದಾರೆ.

Vijayapura ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಪಾನ್ ಶಾಪ್ನಲ್ಲಿ ನಿಗೂಢ ಸ್ಫೋಟ ಸಂಭವಿಸಿ ಮೂವರು ಗಾಯಗೊಂಡಿರುವ ಘಟನೆ ಆತಂಕ ಸೃಷ್ಟಿಸಿದೆ. ಸ್ಫೋಟದಲ್ಲಿ ಅಂಗಡಿ ಮಾಲೀಕ ಸೇರಿದಂತೆ ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಮದಾಪೂರ ಗ್ರಾಮದ ರವಿಕಿರಣ ಅವರಿಗೆ ಸೇರಿದ ಶೆಡ್ ಮಾದರಿಯ ಪಾನ್ ಶಾಪ್ನಲ್ಲಿ ಈ ಘಟನೆ ನಡೆದಿದೆ. ಅಂಗಡಿಯೊಳಗೆ ಇದ್ದ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದ್ದು, ಸುತ್ತಮುತ್ತಲಿನ ಜನರಲ್ಲಿ ಆತಂಕ ಮೂಡಿಸಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಅಂಗಡಿಯೊಳಗಿದ್ದ ಫ್ರಿಡ್ಜ್ಗೆ ಯಾವುದೇ ಹಾನಿಯಾಗಿಲ್ಲ. ಇದರಿಂದ ಸ್ಫೋಟವು ಹೊರಗಡೆಯಿಂದ ಸಂಭವಿಸಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
MUST READ : ಮಾರಕಾಸ್ತ್ರಗಳಿಂದ ಸಿಕ್ಕ ಸಿಕ್ಕ ಕಡೆ ಕೊಚ್ಚಿ ರೌಡಿಶೀಟರ್ನ ಕೊಲೆ
ಅಂಗಡಿ ಮಾಲೀಕ ಸೇರಿ ಮೂವರಿಗೆ ಗಾಯ
ಸ್ಫೋಟದ ಪರಿಣಾಮ ಅಂಗಡಿ ಮಾಲೀಕ ರವಿಕಿರಣ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಪೊಲೀಸರು ಮತ್ತು ತಜ್ಞರ ತಂಡ ಭೇಟಿ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬಬಲೇಶ್ವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಅಗ್ನಿಶಾಮಕ ದಳ, ಸೊಕೋ ತಂಡ ಹಾಗೂ ಶ್ವಾನದಳದಿಂದ ಸ್ಥಳ ಪರಿಶೀಲನೆ ಮಾಡಲಾಗಿದೆ.ಇಲ್ಲಿಯವರೆಗೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಸ್ಫೋಟಕ್ಕೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಪೊಲೀಸ್ ತನಿಖೆ ಮತ್ತು ತಾಂತ್ರಿಕ ಪರಿಶೀಲನೆಯ ಬಳಿಕ ಘಟನೆಯ ಹಿಂದಿನ ಕಾರಣ ಬಹಿರಂಗವಾಗುವ ಸಾಧ್ಯತೆ ಇದೆ.
MUST WATCH :ತಿಪಟೂರಲ್ಲಿ SIR ಪ್ರಕ್ರಿಯೆ ಶುರು – ಆತಂಕ ಪಡಬೇಡಿ ಎಂದ ಆಯುಕ್ತರು | TIPTUR NEWS |




