Mysuru : ಮಕ್ಕಳಿಗೆ ‘ಕುರ್ ಕುರೆ’ ಕೊಡಿಸೋ ಮುನ್ನ ಹುಷಾರ್ – ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಮಗು ಸಾವು

Mysuru : ಇತ್ತೀಚಿನ ದಿನಗಳಲ್ಲಿ ಜಂಕ್ ಫುಡ್ ಹಾಗೂ ಕರಿದ ತಿಂಡಿಗಳನ್ನು ಸೇವಿಸುವುದರಿಂದ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದರ ಬೆನ್ನಲ್ಲೇ ಮೈಸೂರು ಜಿಲ್ಲೆಯಲ್ಲಿ ಕುರ್ಕುರೆ ಪ್ಯಾಕೆಟ್ನಲ್ಲಿದ್ದ ಆಟಿಕೆ ವಸ್ತುವನ್ನು ನುಂಗಿ ಐದು ವರ್ಷದ ಮಗುವೊಂದು ಪ್ರಾಣ ಕಳೆದುಕೊಂಡಿರುವ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ನಡೆದಿದೆ.
ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಮಗು ದಾರುಣ ಸಾವು
ಜಂಕ್ ಫುಡ್ಗಳಲ್ಲಿ ನೀಡಲಾಗುವ ಆಕರ್ಷಕ ಉಡುಗೊರೆಗಳು ಎಷ್ಟರ ಮಟ್ಟಿಗೆ ಮಕ್ಕಳ ಜೀವಕ್ಕೆ ಕಂಟಕವಾಗಬಹುದು ಎಂಬುದಕ್ಕೆ ಈ ದಾರುಣ ಘಟನೆ ಕೈಗನ್ನಡಿಯಾಗಿದೆ. ಕುರ್ಕುರೆ ಪ್ಯಾಕೆಟ್ನಲ್ಲಿದ್ದ ಸಣ್ಣ ಪ್ಲಾಸ್ಟಿಕ್ ಬಾಲ್ವೊಂದನ್ನು ನುಂಗಿ ಐದು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.
ಇದನ್ನು ಓದಿ : Bengaluru ನಲ್ಲಿ ಕಾಂಪೌಂಡ್ ಗೋಡೆ ಕುಸಿದು 5 ವರ್ಷದ ಬಾಲಕ ಸಾವು..!!

ಆಗಿದ್ದೇನು..?
ಮೃತ ಬಾಲಕನನ್ನು ಸಂತೋಷ್ ಹಾಗೂ ಐಶ್ವರ್ಯ ದಂಪತಿಯ ಪುತ್ರ ಮುಕುಂದ ಮಯೂರ್ (5) ಎಂದು ಗುರುತಿಸಲಾಗಿದೆ. ಮಗು ಕುರ್ಕುರೆ ತಿಂದ ಬಳಿಕ ಪ್ಯಾಕೆಟ್ನೊಳಗೆ ಬಂದಿದ್ದ ಸಣ್ಣ ಪ್ಲಾಸ್ಟಿಕ್ ಬಾಲ್ನೊಂದಿಗೆ ಆಟವಾಡುತ್ತಾ ಅದನ್ನು ಬಾಯಿಗೆ ಹಾಕಿಕೊಂಡಿದ್ದಾನೆ. ಈ ವೇಳೆ ಬಾಲ್ ಗಂಟಲಿನಲ್ಲಿ ಸಿಲುಕಿಕೊಂಡಿದೆ. ಗಂಟಲಲ್ಲಿ ಬಾಲ್ ಸಿಲುಕಿದ್ದರಿಂದ ಮಗುವಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡು, ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ.
Mysuru – ಪ್ರಕರಣ ದಾಖಲು!
ಘಟನೆ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನು ನೋಡಿ : ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಮಾ – ಎರಡು ಬಣಗಳ ನಡುವೆ ಮಾರಾಮಾರಿ..!




