Mysuru ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಜವರೇಗೌಡರ ಕೊಪ್ಪಲಿನಲ್ಲಿ ನಡೆದ ದುರಂತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ರಾಜ್ಯವನ್ನು ಬೆಚ್ಚಿಬೀಳಿಸುವ ಘಟನೆ Mysuru ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಜವರೇಗೌಡರ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಇಬ್ಬರು ಪುಟ್ಟ ಮಕ್ಕಳು ಮೃತಪಟ್ಟಿದ್ದು, ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಮಾಹಿತಿಯ ಪ್ರಕಾರ, ಮೂರು ವರ್ಷದ ಧೃತಿ ಹಾಗೂ ಒಂದೂವರೆ ವರ್ಷದ ದಿಶಾ ಮೃತಪಟ್ಟಿರುವುದು ವರದಿಯಾಗಿದೆ. ಘಟನೆಯ ಬಳಿಕ ತಾಯಿ ಪ್ರಿಯಾಂಕಾ ಆತ್ಮಹತ್ಯೆಗೆ ಯತ್ನಿಸಿದ್ದು, ವಿಷಯ ತಿಳಿದ ಸ್ಥಳೀಯರು ತಕ್ಷಣ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
MUST READ : Dharmasthala ಕ್ಕೆ ಹೊಸ ಟೂರ್ ಪ್ಯಾಕೇಜ್ ಪರಿಚಯಿಸಿದ KSTDC..!!
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಮಕ್ಕಳ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.
ಈ ಹೃದಯವಿದ್ರಾವಕ ಘಟನೆಯ ಹಿಂದಿನ ನಿಖರ ಕಾರಣ ಇನ್ನಷ್ಟೇ ಬಹಿರಂಗವಾಗಬೇಕಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ. ಸಾಲಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.
ಈ ಘಟನೆ ಇಡೀ ರಾಜ್ಯದ ಜನರನ್ನು ಬೆಚ್ಚಿಬೀಳಿಸಿದ್ದು, ಕುಟುಂಬದಲ್ಲಿ ಉಂಟಾಗುವ ಸಂಕಷ್ಟಗಳನ್ನು ಸಮಯಕ್ಕೆ ಸರಿಯಾಗಿ ಗುರುತಿಸಿ ನೆರವು ಒದಗಿಸುವ ಅಗತ್ಯವನ್ನು ಮತ್ತೊಮ್ಮೆ ನೆನಪಿಸಿದೆ.
MUST WATCH : ಜಮೀರ್ಗೆ ತಪ್ಪಿದ ಸಚಿವ ಸ್ಥಾನ ತಿಪಟೂರಿನಲ್ಲಿ ಬೃಹತ್ ಪ್ರತಿಭಟನೆ




