Mysuru |ಹುಣಸೂರು ಪುರಸಭೆ ಮಾಜಿ ಅಧ್ಯಕ್ಷೆ ಪುತ್ರಿಯ ನಿಗೂಢ ಸಾವು.

Mysuru ನಗರದ ಸರಸ್ವತಿಪುರಂನಲ್ಲಿ ಗೃಹಿಣಿಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪತಿ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಮೃತೆಯ ಪೋಷಕರು ಕೊಲೆ ಆರೋಪ ಮಾಡಿದ್ದಾರೆ. ಸಂಧ್ಯಾ (30) ಮೃತ ದುರ್ದೈವಿ. ಈಕೆ ಹುಣಸೂರು ಪುರಸಭೆ ಮಾಜಿ ಅಧ್ಯಕ್ಷೆ ಗೀತಾ ನಿಂಗರಾಜು ಅವರ ಪುತ್ರಿ. ಮೈಸೂರು ನಗರದ ಸರಸ್ವತಿ ಪುರಂ ಜವರೇಗೌಡ ಪಾರ್ಕ್ ಸಮೀಪದಲ್ಲಿ ವಾಸವಿದ್ದರು.
ದಾಂಪತ್ಯದಲ್ಲಿ ಕಲಹ
ಸಂಧ್ಯಾ ಅವರನ್ನು ಟಿ.ಕೆ. ಬಡಾವಣೆ ನಿವಾಸಿ ಮಹದೇವ್ ಅವರ ಪುತ್ರ ಅಕ್ಷಯ್ಗೆ ವಿವಾಹ ಮಾಡಿಕೊಡಲಾಗಿತ್ತು. ಕಳೆದ ಕೆಲವು ದಿನಗಳಿಂದ ದಂಪತಿ ನಡುವೆ ವೈಮನಸ್ಸು ಹಾಗೂ ಗಲಾಟೆಗಳು ನಡೆಯುತ್ತಿದ್ದವು ಎನ್ನಲಾಗಿದೆ. ಸದ್ಯ ಏಕಾಏಕಿ ನೇಣು ಬಿಗಿದ ಸ್ಥಿತಿಯಲ್ಲಿ ಮಗಳ ಶವ ಪತ್ತೆಯಾಗಿರುವುದು ಪೋಷಕರಲ್ಲಿ ಆಘಾತ ತರಿಸಿದೆ.
ಇದನ್ನು ಓದಿ : ಮನೆಯಲ್ಲಿ ನೇಣು ಬಿಗಿದುಕೊಂಡು SDRF ಸಿಪಿಐ Suicide..!!

ಪೋಷಕರಿಂದ ಕೊಲೆ ಆರೋಪ
ಆದರೆ ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿರುವ ಮೃತೆಯ ಪೋಷಕರು, ಪತಿ ಹಾಗೂ ಅವರ ಕುಟುಂಬದ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
Mysuru – ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಘಟನೆ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣವೇನು ಎಂಬುದು ತಿಳಿಯಬೇಕಿದೆ.

ಇದನ್ನು ನೋಡಿ : ರಾಜಕೀಯ ಜೀವನ ನೆನೆದು DCM ಭಾವುಕ- CM ಸ್ಥಾನ ಸಿಗದಿದ್ರೆ ಪಕ್ಷ ಬಿಡ್ತಾರಾ PARAM?




