
ಸಚಿವ ಸ್ಥಾನಕ್ಕೆ Nagendra ರಾಜೀನಾಮೆ, ಸಿಎಂ ಡಿಕೆ ಶಿವಕುಮಾರ್ಗೆ ಅಧಿಕೃತ ರಾಜೀನಾಮೆ ಪತ್ರ ಸಲ್ಲಿಕೆ
ವಿಪಕ್ಷಗಳ ಪ್ರತಿಭಟನೆಗೆ ಮಣಿದ ಬಿ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಬಿ. ನಾಗೇಂದ್ರ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ರಾಜೀನಾಮೆ ನೀಡಲ್ಲ ಅಂತಿದ್ದ ನಾಗೇಂದ್ರ ಕೊನೆಗೂ ರಾಜೀನಾಮೆ ಕೊಟ್ಟಿದ್ದಾರೆ.
ರಾಜ್ಯಪಾಲರ ಅಂಗೀಕಾರ ಬಾಕಿ
ನಾಗೇಂದ್ರ ಅವರ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಅಂಗೀಕಾರಕ್ಕಾಗಿ ಕಳುಹಿಸಿಕೊಡಬೇಕಿದೆ. ರಾಜ್ಯಪಾಲರು ರಾಜೀನಾಮೆಯನ್ನು ಅಂಗೀಕರಿಸಿದ ಬಳಿಕವಷ್ಟೇ ಸಚಿವ ಸ್ಥಾನದಿಂದ ಅವರ ನಿರ್ಗಮನ ಅಧಿಕೃತವಾಗಿ ಪೂರ್ಣಗೊಳ್ಳಲಿದೆ.

ಪಕ್ಷಕ್ಕೆ ಮುಜುಗರವಾಗಬಾರದು ಎಂದು ರಾಜೀನಾಮೆ
ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ರೀತಿಯ ರಾಜಕೀಯ ಮುಜುಗರ ಉಂಟಾಗಬಾರದು ಎಂಬ ಉದ್ದೇಶದಿಂದ ನಾಗೇಂದ್ರ ಅವರು ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾತ್ರಿ ವೇಳೆಯೇ ಅವರು ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ.
READ THIS : ದಿಢೀರ್ ದೆಹಲಿಗೆ ಆಗಮಿಸಿದ ನಾಗೇಂದ್ರ

ನಾಗೇಂದ್ರ ಮನವೊಲಿಕೆಗೆ ಡಿಕೆಶಿ ಕಸರತ್ತು?
ಇದರ ನಡುವೆ Nagendra ಅವರನ್ನು ಮನವೊಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಯತ್ನ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ನಾಗೇಂದ್ರ ಅವರೊಂದಿಗೆ ದೂರವಾಣಿ ಮೂಲಕ ಅಥವಾ ಖುದ್ದಾಗಿ ಚರ್ಚೆ ನಡೆಸುವ ಸಾಧ್ಯತೆಯಿದ್ದು, ಅವರ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುವ ಭರವಸೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಬಹುದು ಎನ್ನಲಾಗಿದೆ.
ನಾಗೇಂದ್ರ ಅವರ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಹಾಗೂ ಸರ್ಕಾರ ತಮ್ಮ ಬೆನ್ನಿಗೆ ನಿಲ್ಲಲಿದೆ ಎಂಬ ಭರವಸೆಯನ್ನೂ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ನಲ್ಲಿ ಭಾರೀ ಲೆಕ್ಕಾಚಾರ
ನಾಗೇಂದ್ರ ಅವರ ರಾಜೀನಾಮೆಯನ್ನು ಅಂಗೀಕರಿಸಿದರೆ ರಾಜಕೀಯವಾಗಿ ಆಗುವ ಲಾಭ ಮತ್ತು ನಷ್ಟಗಳ ಕುರಿತು ಪಕ್ಷದ ವರಿಷ್ಠರು ಸೂಕ್ಷ್ಮ ಲೆಕ್ಕಾಚಾರ ನಡೆಸುತ್ತಿದ್ದು, ಈವರೆಗೆ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
MUST WATCH : RSS ACCOUNT ಕೇಳೋ PRIYANK KHARGHE ಮೊದಲು ನೀವು ರಾಜೀನಾಮೆ ನೀಡಿ





