ಬೆಂಗಳೂರು ಹೊರವಲಯದ Nelamangala ಬಳಿಯ ಹುಸ್ಕೂರು ಎಪಿಎಂಸಿ ಬಳಿ ಹಿಟ್ & ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

Nelamangala : ಮೃತ ವ್ಯಕ್ತಿಯನ್ನು ಗಿರೀಶ್ (30) ಎಂದು ಗುರುತಿಸಲಾಗಿದೆ. Bengaluru ಉತ್ತರ ತಾಲೂಕಿನ ವಡೇರಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಅವರು ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಟಾಟಾ ಏಸ್ ವಾಹನ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಗಿರೀಶ್ ಸ್ಥಳದಲ್ಲೇ ಸಾವನ್ನಪ್ಪಿದರು. ಅಪಘಾತದ ಬಳಿಕ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
MUST READ : ಗ್ಯಾಸ್ ಬೆಲೆ ಏರಿಕೆ ಕುರಿತು DK Shivakumar ಆಕ್ರೋಶ..!!

ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಶುಕ್ರವಾರ ತಡರಾತ್ರಿ 12:41ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಇದು ತನಿಖೆಗೆ ಪ್ರಮುಖ ಸಾಕ್ಷಿಯಾಗಲಿದೆ.

ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಲಾಗಿದೆ.
MUST WATCH : ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಸ್ಥಳದಲ್ಲೇ STUDENT ದಾರುಣ ಸಾ* | BENGALURU NEWS |




