Nelamangala : ಮದುವೆಯಾಗಿ ತಿಂಗಳು ಕಳೆಯುವುದರೊಳಗೆ ನವವಿವಾಹಿತೆ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮದುವೆಯಾಗಿ ಒಂದು ತಿಂಗಳು ಕಳೆಯುವ ಒಳಗೆ ನವ ವಿವಾಹಿತೆ ನಿಗೂಢವಾಗಿ ಮೃತಪಟ್ಟಿರುವ ಘಟನೆ Nelamangala ದಲ್ಲಿ ನಡೆದಿದೆ. ಐಶ್ವರ್ಯ (26) ಮೃತ ಯುವತಿಯಾಗಿದ್ದು, ಗಂಡನೇ ಆಕೆಯನ್ನು ಕೊಲೆ ಮಾಡಿರೋದಾಗಿ ಪೋಷಕರು ಆರೋಪಿಸಿದ್ದಾರೆ.
27 ದಿನಗಳ ಹಿಂದೆಯಷ್ಟೇ ಲಿಖಿತ್ ಸಿಂಹ ಜೊತೆ ಐಶ್ವರ್ಯ ಮದುವೆ ನಡೆದಿತ್ತು. ಸುಂದರ ಸಂಸಾರದ ಕನಸು ಕಂಡಿದ್ದ ಐಶ್ವರ್ಯ, ಸಾಂಸಾರಿಕ ಬದುಕನ್ನು ಸರಿಯಾಗಿ ಆರಂಭಿಸುವ ಮುನ್ನವೇ ಪ್ರಾಣ ಕಳೆದುಕೊಂಡಿದ್ದಾರೆ.
ಇದನ್ನು ಓದಿ : ರಾಜ್ಯದಲ್ಲಿ ದಿಢೀರನೇ ಮೊಟ್ಟೆ ಬೆಲೆ ಏರಿಕೆ
ಗಂಡನಿಂದ ಕಿರುಕುಳ
ಮೂಲತಃ ನಾಗಮಂಗಲ ನಿವಾಸಿಗಳಾದ ಮಮತಾ ಮತ್ತು ಕೃಷ್ಣಮೂರ್ತಿ ದಂಪತಿಯ ಹಿರಿ ಮಗಳು ಐಶ್ವರ್ಯ, ಬಾಗಲಗುಂಟೆ ಪೈಪ್ ಲೈನ್ ಮಲ್ಲಸಂದ್ರ ನಿವಾಸಿ ಲಿಖಿತ್ ಅವರೊಂದಿಗೆ ಮದುವೆಯಾಗಿದ್ದರು. ಮದುವೆಯಾದ ಕೆಲವೇ ದಿನಗಳಲ್ಲಿ ಐಶ್ವರ್ಯಗೆ ಗಂಡನಿಂದ ಕಿರುಕುಳ ದೊರೆತಿದೆ ಎಂಬ ಆರೋಪವಿದೆ.
ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
ಈ ಘಟನೆ ನಡೆದ ದಿನ, ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಲಿಖಿತ್ ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದರು. ಕುಟುಂಬಸ್ಥರು ಮನೆಯನ್ನು ಪರಿಶೀಲಿಸಿದಾಗ, ನೇಣು ಬಿಗಿದ ಸ್ಥಿತಿಯಲ್ಲಿ ಐಶ್ವರ್ಯಳ ಶವ ಪತ್ತೆಯಾಗಿದೆ. ಆದರೆ, ಬಾಗಿಲು ಮುಚ್ಚಿರುವುದರಿಂದ, ಗಂಡನಿಂದ ಕೊಲೆ ನಡೆದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಪ್ರಕರಣ ದಾಖಲು
ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐಶ್ವರ್ಯ ಪತಿ ಲಿಖಿತ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಐಶ್ವರ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇದನ್ನು ನೋಡಿ : KN RAJANNA | ಸಿಎಂ ಸಿದ್ದರಾಮಯ್ಯ ಬದಲಾವಣೆ ವಿಚಾರ ಮಾಜಿ ಸಚಿವ ರಾಜಣ್ಣ ಹೀಗ್ಯಾಕಂದ್ರು..?




