ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಎಂದು ಸಿಎಂ Siddu ಘೋಷಿಸಿದರು.

ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸುವಂತಹ ಮಹತ್ವದ ವಿದ್ಯಮಾನವೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಹೈಕಮಾಂಡ್ ಸೂಚನೆ ಬೆನ್ನಲ್ಲೇ ಈ ನಿರ್ಧಾರ!
ರಾಜೀನಾಮೆಗೂ ಮುನ್ನ ತಮ್ಮ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗಾಗಿ ಬ್ರೇಕ್ಫಾಸ್ಟ್ ಸಭೆ ಆಯೋಜಿಸಿದ್ದ Siddu, ಸಭೆಯಲ್ಲಿ ಸಚಿವ ಸಂಪುಟ ಸದಸ್ಯರನ್ನು ಉದ್ದೇಶಿಸಿ ಮಹತ್ವದ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ. ಪಕ್ಷದ ಹೈಕಮಾಂಡ್ ಸೂಚನೆ ಹಾಗೂ ಆಂತರಿಕ ಒಪ್ಪಂದದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ : CM ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ – ಸಿದ್ದುರವರನ್ನು ತಬ್ಬಿ ಕಾಲಿಗೆ ಬಿದ್ದ ಡಿಕೆಶಿ!

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು?
ಇದೇ ಉಪಹಾರಕೂಟ ಸಭೆಯಲ್ಲಿ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುರಿತಾಗಿಯೂ ಇದ್ದ ಕುತೂಹಲಕ್ಕೆ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಪ್ರಸ್ತುತ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಿದ್ದರಾಮಯ್ಯ ಘೋಷಿಸಿದರು. “ಹೈಕಮಾಂಡ್ ಈಗಾಗಲೇ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಮುಂದಿನ ಸಿಎಂ ಸ್ಥಾನಕ್ಕೆ ಅಂತಿಮಗೊಳಿಸಿದೆ” ಎಂದು ಅವರು ಸಭೆಯಲ್ಲಿದ್ದ ಸಚಿವರಿಗೆ ಮಾಹಿತಿ ನೀಡಿದರು.

Siddu DK ಹೆಸರು ಪ್ರಸ್ತಾವ – ಸಚಿವರು ಒಮ್ಮತದ ಬೆಂಬಲ
ಇನ್ನು ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸುತ್ತಿದ್ದಂತೆಯೇ ಸಭೆಯಲ್ಲಿದ್ದ ಸಚಿವರು ಒಮ್ಮತದ ಬೆಂಬಲ ಸೂಚಿಸಿದ್ದಾರೆ. ಪಕ್ಷದ ನಾಯಕತ್ವ ಬದಲಾವಣೆಯ ಪ್ರಕ್ರಿಯೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಸಚಿವ ಸಂಪುಟದ ಸದಸ್ಯರು ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಇದನ್ನು ನೋಡಿ : CONGRESSಗೆ BJP ಏನು ಮಾಡೋದಿಕ್ಕೆ ಆಗುತ್ತೆ – ಹೀಗ್ಯಾಕಂದ್ರು B.Y.VIJAYENDRA.?





