
ELECTION : ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಹೊಸ ನಿರ್ಧಾರ..!
ರಾಜ್ಯದಲ್ಲಿ ನಡೆಯಲಿರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಈಶ್ವರ್ ಖಂಡ್ರೆ ಹೇಳಿದ್ದೇನು?
ಈ ಬಾರಿ ಇವಿಎಂ ಬದಲು ಮತಪತ್ರ ಹಾಗೂ ಮತಪೆಟ್ಟಿಗೆ ಮೂಲಕ ಮತದಾನ ನಡೆಸಲು ನಿರ್ಧರಿಸಲಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ, ಮತಪತ್ರ ಮತ್ತು ಚುನಾವಣೆಗೆ ಅಗತ್ಯವಿರುವ ಸಾಮಗ್ರಿಗಳ ಖರೀದಿಗಾಗಿ ಚುನಾವಣಾ ಆಯೋಗಕ್ಕೆ 128 ಕೋಟಿ ರೂಪಾಯಿ ಹಣ ನೀಡಲಾಗಿದೆ ಎಂದು ತಿಳಿಸಿದ್ದಾರೆ.
READ THIS : ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತೀವ್ರ ಮುಖಭಂಗ!

2 ತಿಂಗಳಲ್ಲಿ ಚುನಾವಣೆ ನಡೆಸಲು ಸಿದ್ಧತೆ
ಗುರುವಾರ ನಡೆದ ಸಂಪುಟ ಸಭೆಯಲ್ಲಿ ಪಂಚಾಯತ್ ಚುನಾವಣೆ ಬಗ್ಗೆಯೂ ಚರ್ಚೆ ನಡೆದಿದ್ದು, ಎರಡು ತಿಂಗಳಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗ್ತಿದೆ.
ELECTION ವೇಳಾಪಟ್ಟಿ ಯಾವಾಗ ಪ್ರಕಟ?
ಒಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಮತ್ತು ಮತಪೆಟ್ಟಿಗೆ ಬಳಕೆಗೆ ಸರ್ಕಾರ ನಿರ್ಧರಿಸಿದೆ. ಚುನಾವಣಾ ಸಿದ್ಧತೆಗಾಗಿ 128 ಕೋಟಿ ರೂಪಾಯಿ ಹಣ ನೀಡಿರುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ. ಎರಡು ತಿಂಗಳೊಳಗೆ ಚುನಾವಣೆ ನಡೆಸುವ ಸಿದ್ಧತೆ ನಡೆಯುತ್ತಿರುವ ಹಿನ್ನೆಲೆ ಅಧಿಕೃತ ಚುನಾವಣಾ ವೇಳಾಪಟ್ಟಿ ಯಾವಾಗ ಪ್ರಕಟವಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

MUST WATCH : ಸಿದ್ದು ಬಳಿಕ ಡಿಕೆಶಿ ದೆಹಲಿಗೆ ದೌಡು ಕೈ ಹೈಕಮಾಂಡ್ ಪ್ಲ್ಯಾನ್ ಏನು




