ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಹಿನ್ನೆಲೆ ರಾಜ್ಯ ಸರ್ಕಾರ ತೆರಿಗೆ ಕಡಿತ ಮಾಡುವುದಿಲ್ಲ ಎಂದು CM Siddaramaiah ತಿಳಿಸಿದ್ದಾರೆ.

ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಹಿನ್ನೆಲೆ ರಾಜ್ಯ ಸರ್ಕಾರ ತೆರಿಗೆ ಕಡಿತ ಮಾಡುವುದಿಲ್ಲ ಎಂದು CM Siddaramaiah ಸ್ಪಷ್ಟಪಡಿಸಿದ್ದಾರೆ.
ತೆರಿಗೆ ಕಡಿತ ಬಗ್ಗೆ ಸಿಎಂ ಪ್ರತಿಕ್ರಿಯೆ
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಕೇಂದ್ರ ಸರ್ಕಾರ ಇಂಧನ ಬೆಲೆ ಹೆಚ್ಚಿಸಿದಾಗ ನಾವು ತೆರಿಗೆ ಕಡಿಮೆ ಮಾಡಬೇಕಾ?” ಎಂದು ಪ್ರಶ್ನಿಸಿದರು.
MUST READ : Hubballi : ಪಿಲ್ಲರ್ ಗುಂಡಿಗೆ ಬಿದ್ದು 9 ವರ್ಷದ ಬಾಲಕ ದುರ್ಮರಣ..!!

ಅವರು ಮುಂದುವರಿದು, “ಕೇಂದ್ರ ಸರ್ಕಾರ ಬೆಲೆ ಏರಿಸಿದಾಗ ನೀವು ಪ್ರಶ್ನೆ ಕೇಳುವುದಿಲ್ಲ. ಆದರೆ ರಾಜ್ಯ ಸರ್ಕಾರ ತೆರಿಗೆ ಕಡಿಮೆ ಮಾಡುತ್ತದೆಯಾ ಎಂದು ಮಾತ್ರ ಕೇಳುತ್ತೀರಿ” ಎಂದು ಹೇಳಿದರು.
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ
ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಸಮಯದ ಇಂಧನ ದರಗಳನ್ನು ಉಲ್ಲೇಖಿಸಿದ ಸಿದ್ದರಾಮಯ್ಯ, “ಮನಮೋಹನ್ ಸಿಂಗ್ ಕಾಲದಲ್ಲಿ ಪೆಟ್ರೋಲ್ ₹70 ಮತ್ತು ಡಿಸೇಲ್ ₹48 ಇತ್ತು. ಗ್ಯಾಸ್ ಬೆಲೆ ₹414 ಆಗಿತ್ತು. ಈಗ ದರ ಎಷ್ಟು ಹೆಚ್ಚಾಗಿದೆ?” ಎಂದು ಪ್ರಶ್ನಿಸಿದರು.

ಮಾಧ್ಯಮಗಳ ವಿರುದ್ಧ ಅಸಮಾಧಾನ
ರಾಜ್ಯ ಸರ್ಕಾರ ಜನತೆಗೆ ಸಹಾಯ ಮಾಡುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, “ಕೇಂದ್ರ ಸರ್ಕಾರ ಬೆಲೆ ಹೆಚ್ಚಿಸಿದಾಗ ಯಾಕೆ ಪ್ರಶ್ನೆ ಕೇಳುವುದಿಲ್ಲ? ನಿಮ್ಮ ಪ್ರಶ್ನೆಗಳಲ್ಲಿ ಕೇಂದ್ರ ಸರ್ಕಾರದ ಪರ ನಿಲುವು ಕಾಣುತ್ತಿದೆ” ಎಂದು ಮಾಧ್ಯಮಗಳ ಮೇಲೂ ಅಸಮಾಧಾನ ವ್ಯಕ್ತಪಡಿಸಿದರು.
MUST WATCH : ಭೂ ಸ್ವಾಧೀನ ವಿರೋಧಿಸಿ ರೈತರು ಪ್ರೊಟೆಸ್ಟ್ ಜೂನ್ 5ಕ್ಕೆ ವಿಧಾನಸೌಧ ಮುತ್ತಿಗೆಗೆ ಕರೆ




