ಡ್ರಗ್ ಪೆಡ್ಲರ್ನನ್ನು ಬಂಧಿಸಲು ತೆರಳಿದ್ದ ಪೊಲೀಸರಿಗೆ ಶಾಕ್

Drug ಮಾರಾಟ ಮಾಡ್ತಿದ್ದ ಆರೋಪಿಯನ್ನ ಬಂಧಿಸಲು ತೆರಳಿದ್ದ ಪೊಲೀಸರಿಗೆ ಆರೋಪಿ ಮನೆಯಲ್ಲಿ ಮಾರಕಾಸ್ತ್ರಗಳು, ಕಳವು ಮೊಬೈಲ್ಗಳು ಹಾಗೂ ಗಾಂಜಾ ಪತ್ತೆಯಾಗಿದೆ. ಬೆಂಗಳೂರಿನ ಬ್ಯಾಟರಾಯನಪುರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಅಕ್ಬರ್ ಶರೀಫ್ ಎಂಬಾತ ಆರೋಪಿಯಾಗಿದ್ದಾನೆ.
ಆರೋಪಿ ಬಂಧನಕ್ಕೆ ಹೋದ ಪೊಲೀಸರಿಗೆ ಶಾಕ್
ಜುಲೈ 1ರಂದು ರಾತ್ರಿ ಸುಮಾರು 10.50ರ ವೇಳೆಗೆ ಗಸ್ತಿನಲ್ಲಿದ್ದ ಪೊಲೀಸರು ಅಕ್ಬರ್ ಶರೀಫ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಆತ ನೀಡಿದ ಮಾಹಿತಿಯ ಮೇರೆಗೆ ಮನೆ ಮೇಲೆ ದಿಢೀರ್ ದಾಳಿ ನಡೆಸಿದಾಗ, ಮನೆಯ ವಿವಿಧ ಭಾಗಗಳಲ್ಲಿ ಅಡಗಿಸಿಟ್ಟಿದ್ದ 17 ಲಾಂಗ್, ಮಚ್ಚು ಸೇರಿದಂತೆ ಹಲವು ಮಾರಕಾಸ್ತ್ರಗಳು ಪತ್ತೆಯಾಗಿವೆ.
ಇದನ್ನೂ ಓದಿ : ದರ್ಶನ್ಗೆ ಶಾಕ್ – ಜೈಲು ಆದೇಶ ಮರುಪರಿಶೀಲನೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಆರೋಪಿ ಮನೆಯಲ್ಲಿದ್ದ 17 ಲಾಂಗು, 230 ಮೊಬೈಲ್ ಜಪ್ತಿ
ಅಷ್ಟೇ ಅಲ್ಲದೆ, ಸುಮಾರು 230 ಕಳವು ಮೊಬೈಲ್ಗಳು ಹಾಗೂ 600ರಿಂದ 700 ಗ್ರಾಂ ಗಾಂಜಾವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ತನಿಖೆ ವೇಳೆ ಅಕ್ಬರ್ ಶರೀಫ್ ಹಲವು ವರ್ಷಗಳಿಂದ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದಾನೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.
ಇನ್ನೂ ಆತನ ತಾಯಿ ಮೆಹರ್ ಉನ್ನಿಸಾ ಕೂಡ 2024ರಲ್ಲಿ ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಸೇರಿದ್ದರು ಎನ್ನಲಾಗಿದೆ. ತಾಯಿ ಬಂಧನದ ಬಳಿಕ ಡ್ರಗ್ಸ್ ಜಾಲವನ್ನು ಅಕ್ಬರ್ ಶರೀಫ್ ನಿರ್ವಹಿಸುತ್ತಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಬ್ಯಾಟರಾಯನಪುರ ರೈಲ್ವೆ ಹಳಿ ಸುತ್ತಮುತ್ತ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಸದ್ಯ ಅಕ್ಬರ್ ಶರೀಫ್ ವಿರುದ್ಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡ್ರಗ್ಸ್ ಜಾಲದ ಹಿಂದಿರುವ ಇತರ ಆರೋಪಿಗಳ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
MUST WATCH : ಚಿನ್ನ ಕದ್ದು ತಗ್ಲಾಕೊಂಡ SHORT MOVIE ನಟ




