
ಅಶ್ಲೀಲ ಕಾಮೆಂಟ್ ಪ್ರಕರಣ – ಯಾವುದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯಲ್ಲ ಎಂದ ನಟಿ Ramya
ನಟಿ ರಮ್ಯಾ ಅವರಿಗೆ ಅಶ್ಲೀಲ ಸಂದೇಶ ಹಾಗೂ ಕಾಮೆಂಟ್ಗಳನ್ನು ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳ ಕುಟುಂಬಸ್ಥರು ಪ್ರಕರಣ ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯುವುದಿಲ್ಲ ಎಂದು ನಟಿ ರಮ್ಯಾ ಖಡಕ್ ಆಗಿ ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯುವುದಿಲ್ಲ
ಪ್ರಕರಣದ ವಿಚಾರಣೆ ವೇಳೆ ಆರೋಪಿಗಳ ಕುಟುಂಬಸ್ಥರು ರಮ್ಯಾ ಅವರಲ್ಲಿ ಕ್ಷಮೆಯಾಚಿಸಿ, “ಈ ಬಾರಿ ತಪ್ಪಾಗಿದೆ, ದಯವಿಟ್ಟು ಪ್ರಕರಣವನ್ನು ವಾಪಸ್ ಪಡೆಯಿರಿ” ಎಂದು ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರಮ್ಯಾ, ಈ ಪ್ರಕರಣ ಎಲ್ಲರಿಗೂ ಒಂದು ಪಾಠವಾಗಬೇಕು. ಹೀಗಾಗಿ ಯಾವುದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯುವುದಿಲ್ಲ ಎಂದು ಹೇಳಿದ್ದಾರೆ.
READ THIS : ಬಂಡೆ ಮಹಾಕಾಳಿ ದೇಗುಲಕ್ಕೆ ಭೇಟಿ ಕೊಟ್ಟ ನಟಿ ರಮ್ಯಾ..!

‘ಮೊಬೈಲ್ ಇದೆ ಅಂತ ಹೇಗೆ ಬೇಕಾದರೂ ಕಾಮೆಂಟ್ ಮಾಡಬಹುದಾ?’
ಸೋಷಿಯಲ್ ಮೀಡಿಯಾ ಹಾಗೂ ಮೊಬೈಲ್ ಬಳಸಿ ಯಾರ ಬಗ್ಗೆಯಾದರೂ ಮನಬಂದಂತೆ ಕೆಟ್ಟದಾಗಿ ಕಾಮೆಂಟ್ ಮಾಡುವುದು ಸರಿಯಲ್ಲ. “ಒಬ್ಬ ಹೆಣ್ಣುಮಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡುವ ಮೊದಲು ಸಾವಿರ ಬಾರಿ ಯೋಚಿಸುವಂತಾಗಬೇಕು. ಈ ಪ್ರಕರಣ ಎಲ್ಲರಿಗೂ ಒಂದು ಪಾಠವಾಗಬೇಕು” ಎಂದು ಅವರು ತಿಳಿಸಿದ್ದಾರೆ. ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್ಗಳನ್ನು ಮಾಡುವವರಿಗೆ ಇಂತಹ ಪ್ರಕರಣಗಳು ಎಚ್ಚರಿಕೆಯ ಸಂದೇಶವಾಗಬೇಕು ಎಂಬ ನಿಲುವನ್ನು ರಮ್ಯಾ ವ್ಯಕ್ತಪಡಿಸಿದ್ದಾರೆ.
‘ಎಷ್ಟು ಬಾರಿ ಕರೆದರೂ ಸಾಕ್ಷ್ಯ ಹೇಳಲು ಸಿದ್ಧ’
ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಾಲಯ ಎಷ್ಟು ಬಾರಿ ಸಾಕ್ಷ್ಯ ಹೇಳಲು ಕರೆದರೂ ತಾನು ಹಾಜರಾಗಿ ಸಾಕ್ಷ್ಯ ನೀಡಲು ಸಿದ್ಧ ಎಂದು ರಮ್ಯಾ ಹೇಳಿದ್ದಾರೆ.
ಆದರೆ ಆರೋಪಿಗಳನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಪ್ರಕರಣದಲ್ಲಿ ಈಗಾಗಲೇ ಸಿಸಿಬಿ ಪೊಲೀಸರು ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಸದ್ಯ ಪ್ರಕರಣದ ವಿಚಾರಣೆ 6ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಆರೋಪಿಗಳ ಕುಟುಂಬಸ್ಥರು ಪ್ರಕರಣ ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ.
MUST WATCH : ದೊರೆ ಅಂತ ಕರಿಬೇಡಿ ಎಂದ DKS – ಡಿಕೆಶಿಗೆ VIJAYENDRA ಫುಲ್ ಕ್ಲಾಸ್..!




