ವಿಐಪಿ ಸೆಲ್ನಿಂದ Prajwal Revanna ಎತ್ತಂಗಡಿ; ಜೈಲಲ್ಲಿ ಸಿಕ್ಕ ಮೊಬೈಲ್ನಲ್ಲೂ ಅಶ್ಲೀಲ ವಿಡಿಯೋಗಳು ಪತ್ತೆ!

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಅತ್ಯಾಚಾರ ಪ್ರಕರಣದ ಅಪರಾಧಿ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಸೆಲ್ನಲ್ಲಿ ಮೊಬೈಲ್ ಫೋನ್ ಪತ್ತೆಯಾದ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ.

20 ಕೈದಿಗಳಿರುವ ಬ್ಯಾರಕ್ನಲ್ಲಿ ಪ್ರಜ್ವಲ್
ಮೊಬೈಲ್ ಪತ್ತೆಯಾದ ಬೆನ್ನಲ್ಲೇ ಜೈಲು ಆಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, Prajwal Revanna ಅವರನ್ನು ವಿಐಪಿ ಸೆಲ್ನಿಂದ ಸಾಮಾನ್ಯ ಕೈದಿಗಳಿರುವ ಬ್ಯಾರಕ್ಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸುಮಾರು 20 ಕೈದಿಗಳಿರುವ ಬ್ಯಾರಕ್ನಲ್ಲಿ ಅವರನ್ನು ಇರಿಸಲಾಗಿದ್ದು, ಸಿಸಿಟಿವಿ ಕಣ್ಗಾವಲಿನಲ್ಲಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ : ಜೈಲಿನಲ್ಲೂ ಮೊಬೈಲ್ ಬಿಟ್ಟಿರದ ಪ್ರಜ್ವಲ್ ರೇವಣ್ಣ!

ಮೊಬೈಲ್ನಲ್ಲಿ 90 ಅಶ್ಲೀಲ ವಿಡಿಯೋ ಪತ್ತೆ
ಜೈಲಿನಲ್ಲಿ ಪತ್ತೆಯಾದ ಮೊಬೈಲ್ ಫೋನ್ ಪರಿಶೀಲನೆ ವೇಳೆ ಸುಮಾರು 90 ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ ಎನ್ನಲಾಗಿದೆ. ಇದರ ಜೊತೆಗೆ, ಪ್ರಜ್ವಲ್ ರೇವಣ್ಣ ಅವರು ಪರಿಚಿತರೊಂದಿಗೆ ನಡೆಸಿದ ಸಂಭಾಷಣೆಗಳ ಆಡಿಯೋ ರೆಕಾರ್ಡ್ಗಳು ಹಾಗೂ ಅಪರಿಚಿತ ವ್ಯಕ್ತಿಯೊಂದಿಗಿನ ಸಂಭಾಷಣೆಯ ದಾಖಲೆ ಕೂಡ ಪತ್ತೆಯಾಗಿದೆ ಎಂದು ಹೇಳಲಾಗಿದೆ.
ಇನ್ನು ಜೈಲು ಕೊಠಡಿಯೊಳಗೆ ಜೈಲು ಸಮವಸ್ತ್ರ ಧರಿಸದೆ ವೈಯಕ್ತಿಕ ಉಡುಪು ಧರಿಸಿ ಪ್ರಜ್ವಲ್ ರೇವಣ್ಣ ಮೊಬೈಲ್ನಲ್ಲಿ ಮಾತನಾಡುತ್ತಿರುವ ದೃಶ್ಯವೂ ಲಭ್ಯವಾಗಿದೆ ಎನ್ನಲಾಗಿದೆ. ಈ ವಿಡಿಯೋವನ್ನು ಯಾವಾಗ ಚಿತ್ರೀಕರಿಸಲಾಗಿದೆ ಎಂಬುದು ತಿಳಿದುಬಂದಿಲ್ಲ.

Prajwal Revanna – ಜೈಲು ಭದ್ರತೆ ಬಗ್ಗೆ ಪ್ರಶ್ನೆಗಳು
ನಿನ್ನೆ ಸಿಸಿಬಿ ಅಧಿಕಾರಿಗಳು ಜೈಲು ಕೊಠಡಿಯ ಮೇಲೆ ದಾಳಿ ನಡೆಸಿದಾಗ, ಒಂದು ಮೊಬೈಲ್ ಫೋನ್ ಪತ್ತೆಯಾಗಿತ್ತು. ವಿಡಿಯೋ ಬಹಿರಂಗವಾದ ಬೆನ್ನಲ್ಲೇ ಜೈಲು ಆಡಳಿತದ ಭದ್ರತಾ ವ್ಯವಸ್ಥೆ ಹಾಗೂ ನಿಯಮಗಳ ಪಾಲನೆ ಕುರಿತು ಹಲವು ಪ್ರಶ್ನೆಗಳು ಎದ್ದಿವೆ
ಇದನ್ನು ನೋಡಿ : ಭೀಮನ ಅಮಾವಾಸ್ಯೆಯಂದು ಅಪಘಾ* – ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಐವರಿಗೆ ಗಾಯ





