Politics : 8ಕ್ಕೂ ಹೆಚ್ಚು ಯುವ ನಾಯಕರಿಗೆ ಮಂತ್ರಿಗಿರಿ?

Politics : ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ನೂತನ ಸಚಿವ ಸಂಪುಟ ರಚನೆಯ ಕಸರತ್ತು ಅಂತಿಮ ಘಟ್ಟಕ್ಕೆ ತಲುಪಿದೆ.
ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು ಬಹುತೇಕ ಇಂದು ಸಂಜೆಯ ವೇಳೆಗೆ ಸಚಿವರ ಅಂತಿಮ ಪಟ್ಟಿ ಸಿದ್ಧವಾಗುವ ಸಾಧ್ಯತೆಯಿದೆ.
ಮಲ್ಲಿಕಾರ್ಜುನ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಭೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಅವರ ಅಧಿಕೃತ ನಿವಾಸದಲ್ಲಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ.
ಇದನ್ನು ಓದಿ : ಸಿದ್ದರಾಮಯ್ಯ ಕೆಟ್ಟುಹೋಗಿರುವ ಗಾಡಿಯನ್ನು ಡಿಕೆಶಿಗೆ ಹಸ್ತಾಂತರಿಸಿದ್ದಾರೆ – ಆರ್. ಅಶೋಕ್

‘ಹಳೆ ಬೇರು, ಹೊಸ ಚಿಗುರು’ ಫಾರ್ಮುಲಾ
ಈ ಬಾರಿ ಸಚಿವ ಸಂಪುಟ ರಚನೆಯಲ್ಲಿ ಅನುಭವಿ ಹಿರಿಯ ನಾಯಕರ ಜೊತೆಗೆ ಯುವ ಮತ್ತು ಹೊಸ ಮುಖಗಳಿಗೆ ಅವಕಾಶ ನೀಡುವ ‘ಹಳೆ ಬೇರು, ಹೊಸ ಚಿಗುರು’ ಸೂತ್ರವನ್ನು ಕಾಂಗ್ರೆಸ್ ಹೈಕಮಾಂಡ್ ಅನುಸರಿಸುವ ಸಾಧ್ಯತೆ ಇದೆ.
ಇದರ ಅನ್ವಯ ಸುಮಾರು 8ರಿಂದ 10 ಹೊಸ ಶಾಸಕರಿಗೆ ಸಚಿವ ಸ್ಥಾನ ದೊರೆಯುವ ನಿರೀಕ್ಷೆಯಿದ್ದು, ಯುವ ನಾಯಕರಿಗೆ ಎಷ್ಟು ಪ್ರಮಾಣದಲ್ಲಿ ಅವಕಾಶ ಸಿಗಲಿದೆ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಎರಡು ಹಂತಗಳಲ್ಲಿ ಸಂಪುಟ ರಚನೆ?
ಮಾಹಿತಿಯ ಪ್ರಕಾರ, ಕಾಂಗ್ರೆಸ್ ಹೈಕಮಾಂಡ್ ಸಚಿವ ಸಂಪುಟವನ್ನು ಎರಡು ಹಂತಗಳಲ್ಲಿ ರಚಿಸುವ ಬಗ್ಗೆ ಚಿಂತನೆ ನಡೆಸಿದೆ. ಮೊದಲ ಹಂತದಲ್ಲಿ 8ರಿಂದ 12 ಪ್ರಮುಖ ಶಾಸಕರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗುವ ಸಾಧ್ಯತೆ ಇದೆ.
ಉಳಿದ ಸ್ಥಾನಗಳನ್ನು ಮುಂಬರುವ ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚುನಾವಣೆಗಳ ನಂತರ ಭರ್ತಿ ಮಾಡುವ ಮೂಲಕ ಎರಡನೇ ಹಂತದಲ್ಲಿ ಸಂಪುಟ ವಿಸ್ತರಣೆ ನಡೆಸುವ ಯೋಜನೆ ರೂಪಿಸಲಾಗಿದೆ ಎನ್ನಲಾಗಿದೆ.

ಸಚಿವ ಸ್ಥಾನಕ್ಕಾಗಿ ಲಾಬಿ
ಇನ್ನು ಸಚಿವ ಸ್ಥಾನಕ್ಕಾಗಿ ಹಲವು ಹಿರಿಯ, ಯುವ ಶಾಸಕರು ಲಾಬಿ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಇಂದಿನ ಸಭೆಯ ಬಳಿಕ ಹೊರಬರುವ ಅಂತಿಮ ಪಟ್ಟಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಲಿದೆ.
ಕಾಂಗ್ರೆಸ್ ಹೈಕಮಾಂಡ್ ಯಾವ ನಾಯಕರಿಗೆ ಮಂತ್ರಿಭಾಗ್ಯ ನೀಡಲಿದೆ ಎಂಬುದನ್ನು ಕಾದುನೋಡಬೇಕಿದೆ.
ಇದನ್ನು ನೋಡಿ : ಗಡಿ ತಾಲೂಕಿನಲ್ಲಿ ನೀರಿಗಾಗಿ ಹಾಹಾಕಾರ ಸಮಸ್ಯೆ ಪರಿಹರಿಸದ ಪಿಡಿಒ ವರ್ಗಾವಣೆಗೆ ಆಗ್ರಹ




