Jasprit Bumrah ಬುಮ್ರಾಗೆ ಮತ್ತೆ ಗಾಯ; ಲಂಕಾ ಟೆಸ್ಟ್ ಸರಣಿಯಿಂದ ಔಟ್

ಭಾರತ ಕ್ರಿಕೆಟ್ ತಂಡಕ್ಕೆ ಮತ್ತೊಂದು ದೊಡ್ಡ ಹಿನ್ನಡೆಯಾಗಿದ್ದು, ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಗಾಯದ ಕಾರಣದಿಂದ ಆಗಸ್ಟ್ 15ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ.
ಬುಮ್ರಾಗೆ ಮತ್ತೆ ಗಾಯ
ಬುಮ್ರಾ ಅವರು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ (CoE) ನಲ್ಲಿ ಪುನರ್ವಸತಿ ಚಿಕಿತ್ಸೆ ಪಡೆಯುತ್ತಿದ್ದರು. ಆರಂಭಿಕ ಫಿಟ್ನೆಸ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದರೂ, ಅವರ ಎಡ ಮೊಣಕಾಲಿನ ಹಳೆಯ ಗಾಯ ಸಂಪೂರ್ಣವಾಗಿ ಗುಣಮುಖವಾಗದ ಹಿನ್ನೆಲೆಯಲ್ಲಿ ಅಪಾಯ ತಪ್ಪಿಸಲು ಅವರನ್ನು ತಂಡದಿಂದ ಹೊರಗಿಡಲು ಬಿಸಿಸಿಐ ವೈದ್ಯಕೀಯ ತಂಡ ನಿರ್ಧರಿಸಿದೆ.
ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ವೇಳೆ ಬುಮ್ರಾ ಗಾಯಗೊಂಡಿದ್ದರು. ಇದೇ ಕಾರಣದಿಂದ ಲಾರ್ಡ್ಸ್ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲೂ ಅವರು ಆಡಿರಲಿಲ್ಲ. ಬಳಿಕ ದೈಹಿಕ ಸಾಮರ್ಥ್ಯ ಪರೀಕ್ಷೆಯ ಆಧಾರದ ಮೇಲೆ ಶ್ರೀಲಂಕಾ ಸರಣಿಗೆ ಆಯ್ಕೆ ಮಾಡಲಾಗಿದ್ದರೂ, ಅಂತಿಮವಾಗಿ ಅವರು ಸರಣಿಯಿಂದ ಹೊರಗುಳಿದಿದ್ದಾರೆ.
ಇದನ್ನು ಓದಿ : Jasprit Bumrah ಗೆ 18 ತಿಂಗಳು T20 ಕ್ರಿಕೆಟ್ಗೆ ಬ್ರೇಕ್..!!

ಭಾರತಕ್ಕೆ ಹೆಚ್ಚಿದ ಸವಾಲು
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (WTC) ಫೈನಲ್ ಪ್ರವೇಶಿಸುವ ಗುರಿಯಲ್ಲಿರುವ ಭಾರತಕ್ಕೆ ಈ ಬೆಳವಣಿಗೆ ಹಿನ್ನಡೆಯಾಗಿದೆ. ಫೈನಲ್ ಅವಕಾಶ ಜೀವಂತವಾಗಿಡಲು ಭಾರತ ಉಳಿದಿರುವ ಒಂಬತ್ತು ಟೆಸ್ಟ್ ಪಂದ್ಯಗಳಲ್ಲಿ ಕನಿಷ್ಠ ಏಳು ಪಂದ್ಯಗಳನ್ನು ಗೆಲ್ಲಬೇಕಿದೆ.
ಗಾಯಾಳುಗಳ ಸಂಖ್ಯೆ ಹೆಚ್ಚಳ
ಈಗಾಗಲೇ ಹರ್ಷಿತ್ ರಾಣಾ ಹಾಗೂ ನಿತೀಶ್ ಕುಮಾರ್ ರೆಡ್ಡಿ ಗಾಯದ ಕಾರಣದಿಂದ ಸರಣಿಯಿಂದ ಹೊರಗುಳಿದಿದ್ದಾರೆ. ಇದರ ಜೊತೆಗೆ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಮಂಡಿರಜ್ಜು ಗಾಯದಿಂದ ಮೊದಲ ಟೆಸ್ಟ್ಗೆ ಅಲಭ್ಯರಾಗಲಿದ್ದು, ಅವರ ಬದಲಿಗೆ ದೇಶೀಯ ಕ್ರಿಕೆಟ್ ಹಾಗೂ ಭಾರತ ‘ಎ’ ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆಫ್-ಸ್ಪಿನ್ ಆಲ್ರೌಂಡರ್ ಸರಾಂಶ್ ಜೈನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಇನ್ನೊಂದೆಡೆ, ವೇಗಿ ಆಕಾಶ್ ದೀಪ್ ಕೂಡ ಬೆನ್ನಿನ ಒತ್ತಡದ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಸರಣಿಗೆ ಲಭ್ಯವಿಲ್ಲ.

ಇದನ್ನು ನೋಡಿ : ರಾಜೀನಾಮೆ ಬಗ್ಗೆ ವದಂತಿ ಹಬ್ಬಿಸ್ತಿದ್ದಾರೆ -ಸಭಾಪತಿ ಹೊರಟ್ಟಿ ಹೀಗ್ಯಾಕಂದ್ರು




