ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ Harmanpreet Kaur ಗೆ ‘ಪದ್ಮಶ್ರೀ’ ಪ್ರಶಸ್ತಿ ಪ್ರದಾನ

ಭಾರತೀಯ ಕ್ರೀಡಾ ಲೋಕಕ್ಕೆ, ವಿಶೇಷವಾಗಿ ಮಹಿಳಾ ಕ್ರಿಕೆಟ್ ಕ್ಷೇತ್ರಕ್ಕೆ ನೀಡಿರುವ ಅದ್ಭುತ ಕೊಡುಗೆಯನ್ನು ಪರಿಗಣಿಸಿ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಅವರಿಗೆ ದೇಶದ ಪ್ರತಿಷ್ಠಿತ ನಾಗರಿಕ ಗೌರವವಾದ ‘ಪದ್ಮಶ್ರೀ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಹರ್ಮನ್ಪ್ರೀತ್ ಕೌರ್ಗೆ ಪದ್ಮಶ್ರೀ ಗೌರವ
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರ್ಮನ್ಪ್ರೀತ್ ಕೌರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಸನ್ಮಾನಿಸಿದರು.
READ THIS : ಕೋಲಾರ ನಗರಸಭೆ ಕಚೇರಿ ಮೇಲೆ ಲೋಕಾ ರೇಡ್.!

ಕ್ರೀಡಾ ಸಾಧನೆ
ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿಯಾಗಿ ಹರ್ಮನ್ಪ್ರೀತ್ ಕೌರ್ ಹಲವು ಐತಿಹಾಸಿಕ ಸಾಧನೆಗಳಿಗೆ ಮಾಡಿದ್ದಾರೆ. ಅವರ ನಾಯಕತ್ವ, ಜವಾಬ್ದಾರಿಯುತ ಆಟ ಹಾಗೂ ಮಹಿಳಾ ಕ್ರಿಕೆಟ್ ಬೆಳವಣಿಗೆಯಲ್ಲಿ ನೀಡಿದ ಮಹತ್ವದ ಕೊಡುಗೆಯನ್ನು ಮೆಚ್ಚಿ ಕೇಂದ್ರ ಸರ್ಕಾರವು 2026ರ ಪದ್ಮ ಪ್ರಶಸ್ತಿಗಳ ಪಟ್ಟಿಯಲ್ಲಿ ಅವರ ಹೆಸರನ್ನು ಘೋಷಿಸಿತ್ತು.
Harmanpreet Kaur – ಹೆಮ್ಮಯ ಕ್ಷಣ
ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಹರ್ಮನ್ಪ್ರೀತ್, “ಇದು ನನ್ನ ಕ್ರೀಡಾ ಜೀವನದ ಅತ್ಯಂತ ಹೆಮ್ಮೆಯ ಹಾಗೂ ಸ್ಮರಣೀಯ ಕ್ಷಣವಾಗಿದೆ,” ಎಂದು ಸಂತಸ ವ್ಯಕ್ತಪಡಿಸಿದರು.

ಗಣ್ಯರ ಉಪಸ್ಥಿತಿ
ಈ ವರ್ಣರಂಜಿತ ಸಮಾರಂಭದಲ್ಲಿ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ದೇಶದ ಪ್ರಮುಖ ರಾಜಕೀಯ ಧುರಿತರು ಮತ್ತು ಗಣ್ಯರು ಉಪಸ್ಥಿತರಿದ್ದರು.
MUST WATCH : ಗೃಹಲಕ್ಷ್ಮೀ ಹಣ ದುರುಪಯೋಗ ಆಗ್ತಿದೆ – ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ





