ಡಿಕೆಶಿ ಕನಸಿನ ‘ಗಳಿಗೆ’ – ನೂತನ ಸಿಎಂ ಜೊತೆ ಪ್ರಮಾಣವಚನ ಸ್ವೀಕರಿಸುತ್ತಿರುವ ಏಕೈಕ DCM

ಇಂದು ಸಂಜೆ ಡಿ.ಕೆ. ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಬೆನ್ನಲ್ಲೇ, ಹಿರಿಯ ದಲಿತ ನಾಯಕ, ತುಮಕೂರಿನ ಕೊರಟಗೆರೆ ಶಾಸಕ ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವುದು ಬಹುತೇಕ ಖಚಿತವಾಗಿದೆ.
ಕೊನೆಗೂ DCM ಸೂತ್ರಕ್ಕೆ ಶರಣು
ಆರಂಭದಲ್ಲಿ ಕೇವಲ ಮುಖ್ಯಮಂತ್ರಿ ಹುದ್ದೆಯನ್ನಷ್ಟೇ ಸೃಷ್ಟಿಸಲು ಯೋಚಿಸಿದ್ದ ಕಾಂಗ್ರೆಸ್ ಹೈಕಮಾಂಡ್ ಸುದೀರ್ಘ ಚರ್ಚೆಗಳ ನಂತರ ಪಕ್ಷದ ಒಗ್ಗಟ್ಟು ಮತ್ತು ಪ್ರಮುಖ ಸಮುದಾಯಗಳ ಪ್ರಾತಿನಿಧ್ಯ ಪ್ರಾತಿನಿಧ್ಯವನ್ನು ಬ್ಯಾಲೆನ್ಸ್ ಮಾಡಲು ಕೊನೆಗೂ DCM ಸೂತ್ರಕ್ಕೆ ಶರಣಾಗಿದೆ.

ಗೌರವಯುತ ಸ್ಥಾನ ನೀಡಲೇಬೇಕು ಎಂದು ಸಿದ್ದು ಪಟ್ಟು
ಡಾ. ಪರಮೇಶ್ವರ್ ಅವರಿಗೆ ಡಿಸಿಎಂ ಸ್ಥಾನ ದೊರಕುವಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ನಿರ್ಣಾಯಕವಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಸತತ ಎಂಟು ವರ್ಷಗಳ ಕಾಲ ಪಕ್ಷವನ್ನು ಮುನ್ನಡೆಸಿದ ಪರಮೇಶ್ವರ್ ಅವರಿಗೆ ಗೌರವಯುತ ಸ್ಥಾನ ನೀಡಲೇಬೇಕು ಎಂದು ಸಿದ್ದರಾಮಯ್ಯ ಹೈಕಮಾಂಡ್ ಸಿದ್ದರಾಮಯ್ಯ ಹೈಕಮಾಂಡ್ ಮುಂದೆ ಗಟ್ಟಿಯಾದ ಪಟ್ಟು ಹಿಡಿದಿದ್ದರು. ಈ ಒತ್ತಡಕ್ಕೆ ಮಣಿದು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗ್ತಿದೆ.

ಸೆಕೆಂಡ್ ಇನ್ ಕಮಾಂಡ್
ಹೊಸ ಸಚಿವ ಸಂಪುಟದಲ್ಲಿ ಹಲವು ಹಿರಿಯ ನಾಯಕರು ಡಿಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟಿದ್ದರೂ, ಸರ್ಕಾರದಲ್ಲಿ ಅಧಿಕಾರದ ಹಲವು ಕೇಂದ್ರಗಳು ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ಅಂತಿಮವಾಗಿ ಡಾ. ಜಿ. ಪರಮೇಶ್ವರ್ ಅವರಿಗೆ ಮಾತ್ರ ಈ ಜವಾಬ್ದಾರಿ ನೀಡಲು ಕಾಂಗ್ರೆಸ್ ವರಿಷ್ಠರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಇದರೊಂದಿಗೆ ಡಿಕೆಶಿ ನೇತೃತ್ವದ ಸರ್ಕಾರದಲ್ಲಿ ಪರಮೇಶ್ವರ್ ‘ಸೆಕೆಂಡ್ ಇನ್ ಕಮಾಂಡ್’ ಆಗಿ ಹೊರಹೊಮ್ಮಲಿದ್ದಾರೆ.
ಇದನ್ನು ಓದಿ : ಡಿಕೆಶಿ ಸಂಪುಟದಲ್ಲಿ ತುಮಕೂರಿನ ಯಾರ್ಯಾರಿಗೆ ಮಣೆ..?

CM ರೇಸ್ನಲ್ಲಿದ್ದ ಪರಮೇಶ್ವರ್ಗೆ DCM ಹುದ್ದೆ
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿದ್ದಂತೆ, ಸಿಎಂ ಹುದ್ದೆಯ ಆಕಾಂಕ್ಷಿಯಾಗಿದ್ದ ಪರಮೇಶ್ವರ್ ಅವರಿಗೆ ಸ್ಥಾನ ತಪ್ಪಿದ ಹಿನ್ನೆಲೆಯಲ್ಲಿ ದಲಿತ ಸಮುದಾಯದ ಕೆಲವು ವಲಯಗಳಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ಅವರಿಗೆ ಕನಿಷ್ಠ ಡಿಸಿಎಂ ಸ್ಥಾನ ನೀಡಬೇಕು ಎಂದು ವಿವಿಧ ಮಠಾಧೀಶರು, ಮುಖಂಡರು ಹಾಗೂ ಅಭಿಮಾನಿ ಬಳಗ ಒತ್ತಾಯ ಮಾಡಿತ್ತು. ಈ ಹಿನ್ನೆಲೆಯಲ್ಲಿ ಡಿಸಿಎಂ ಹುದ್ದೆ ನೀಡುವ ಮೂಲಕ ಪಕ್ಷವು ಸಾಮಾಜಿಕ ಸಮತೋಲನ ಸಾಧಿಸಲು ಮುಂದಾಗಿದೆ ಎಂಬ ವಿಶ್ಲೇಷಣೆ ಕೇಳಿಬರುತ್ತಿದೆ.

ಪರಂ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ಹೊಸದೇನಲ್ಲ
ಇನ್ನು ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ಹೊಸದೇನಲ್ಲ. ಈ ಹಿಂದೆ ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಆಡಳಿತ ಅವಧಿಯಲ್ಲೂ ಅವರು ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.
ಇದನ್ನು ನೋಡಿ : BJP ಮಾಜಿ MLC KIDNAP – KIDNAP ಮಾಡಿ 3 ಕೋಟಿಗೆ ಡಿಮ್ಯಾಂಡ್..!




