
ಪತ್ನಿ ಜೊತೆ ಗಲಾಟೆ – ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಹಾರಿ SUICIDE ಗೆ ಯತ್ನಿಸಿದ ರೋಗಿ
ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (KMC) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೋರ್ವ ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಗಾಯಗೊಂಡ ವ್ಯಕ್ತಿ
ಆಸ್ಪತ್ರೆಯಿಂದ ಹಾರಿ ಮತ್ತೆ ಆತ್ಮಹತ್ಯೆಗೆ ಯತ್ನ
ಕೆಲ ದಿನಗಳ ಹಿಂದೆ ಪತ್ನಿಯೊಂದಿಗೆ ಜಗಳವಾದ ಬಳಿಕ ವಿಷ ಸೇವಿಸಿದ್ದ ರಾಜೇಶ್ ಅಸ್ವಸ್ಥಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲದ KMC ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿತ್ತು.
READ THIS : ನದಿಗೆ ಹಾರಿ ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ!

ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದ ರಾಜೇಶ್ರನ್ನು ಡಿಸ್ಚಾರ್ಜ್ ಮಾಡಲು ಸಿದ್ಧತೆ ನಡೆಸಲಾಗುತ್ತಿತ್ತು. ಈ ನಡುವೆ ಆಸ್ಪತ್ರೆ ಸಿಬ್ಬಂದಿಯೊಂದಿಗೆ ವಾಕಿಂಗ್ಗೆ ತೆರಳುವುದಾಗಿ ಹೇಳಿ ಕೊಠಡಿಯಿಂದ ಹೊರಬಂದ ಅವರು, ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
SUICIDE ಗೆ ಯತ್ನ – ರೋಗಿ ಗಂಭೀರ!
ಆಸ್ಪತ್ರೆಯ ಕಿಟಕಿಗೆ ಅಳವಡಿಸಿದ್ದ ಸುರಕ್ಷತಾ ಜಾಲರಿಯನ್ನು ದಾಟಿ ಅವರು ಕೆಳಗೆ ಬಿದ್ದಿದ್ದು, ಘಟನೆಯಿಂದ ಗಂಭೀರ ಗಾಯಗಳಾಗಿವೆ. ತಕ್ಷಣವೇ ಆಸ್ಪತ್ರೆ ಸಿಬ್ಬಂದಿ ಅವರನ್ನು ರಕ್ಷಿಸಿ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಿಸಿದ್ದಾರೆ.
ಸದ್ಯ ರಾಜೇಶ್ ಅವರ ಸ್ಥಿತಿ ಗಂಭೀರವಾಗಿದ್ದು, KMC ಆಸ್ಪತ್ರೆಯ ತಜ್ಞ ವೈದ್ಯರ ತಂಡ ಚಿಕಿತ್ಸೆ ಮುಂದುವರಿಸಿದೆ. ಘಟನೆಯ ಕುರಿತು ಆಸ್ಪತ್ರೆ ಆಡಳಿತ ಹಾಗೂ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

MUST WATCH : ತುಮಕೂರಿಗೆ ನೀರು ಹರಿಸಲು ಒತ್ತಾಯ..! – ಬರದ ನಾಡಿಗೆ ಹರಿಯುತ್ತಾ ಭದ್ರ ನೀರು..?




