ಪೋಕ್ಸೋ ಪ್ರಕರಣದಲ್ಲಿ Vachanananda Sri ಗೆ ಕೊಂಚ ರಿಲೀಫ್

ಪೋಕ್ಸೋ ಪ್ರಕರಣ ಸಂಬಂಧ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ದಾವಣಗೆರೆಯ ವಿಶೇಷ ಪೋಕ್ಸೋ ನ್ಯಾಯಾಲಯವು ಷರತ್ತುಬದ್ಧ ರೆಗ್ಯುಲರ್ ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ ಅವರು ಕೆಲವು ಷರತ್ತುಗಳನ್ನು ವಿಧಿಸಿ ಜಾಮೀನು ನೀಡುವಂತೆ ಆದೇಶ ಹೊರಡಿಸಿದ್ದಾರೆ.
ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ರದ್ದು
ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಚನಾನಂದ ಸ್ವಾಮೀಜಿ ಪಡೆದಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿತ್ತು. ಜೊತೆಗೆ ಮೂರು ವಾರಗಳೊಳಗೆ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿ ರೆಗ್ಯುಲರ್ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ನಿರ್ದೇಶಿಸಿತ್ತು. ಅದರಂತೆ ಜೂನ್ 27ರಂದು ಸ್ವಾಮೀಜಿ ವಿಶೇಷ ಪೋಕ್ಸೋ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಎರಡೂ ಕಡೆಯವರ ವಾದ ಆಲಿಸಿದ ನ್ಯಾಯಾಲಯವು ಜುಲೈ 6ರಂದು ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಷರತ್ತುಗಳೊಂದಿಗೆ ರೆಗ್ಯುಲರ್ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ವಿವರ
ಈಗಾಗಲೇ Vachanananda Sri ವಿರುದ್ಧ 7 ಮಕ್ಕಳ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದ್ದು, ಮಕ್ಕಳನ್ನು ಸ್ನಾನದ ಕೊಠಡಿ ಹಾಗೂ ಮಲಗುವ ಕೊಠಡಿಗೆ ಕರೆದು ಲೈಂಗಿಕ ಕಿರುಕುಳ ನೀಡಿದ ಆರೋಪ ಅವರ ವಿರುದ್ಧ ದಾಖಲಾಗಿದೆ.
ಸಂತ್ರಸ್ತರ ಪರವಾಗಿ ವಕೀಲ ರಮೇಶ್ ಕಲಾಲ್ ಹಾಗೂ ಸ್ವಾಮೀಜಿ ಪರವಾಗಿ ಹಿರಿಯ ವಕೀಲ ಎಸ್.ವಿ. ಪಾಟೀಲ್ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.
ಇದನ್ನು ಓದಿ : ವಚನಾನಂದ ಸ್ವಾಮೀಜಿ ವಿರುದ್ಧದ POCSO ಪ್ರಕರಣದಲ್ಲಿ ಹೈಕೋರ್ಟ್ ಅಸಮಾಧಾನ..!!

ಹೈಕೋರ್ಟ್ ನೀಡಿದ್ದ ಆದೇಶವೇನು?
ಈ ಪ್ರಕರಣದಲ್ಲಿ ಮೊದಲು ನಿರೀಕ್ಷಣಾ ಜಾಮೀನು ಪಡೆದಿದ್ದ ವಚನಾನಂದ ಸ್ವಾಮೀಜಿಗೆ ಹೈಕೋರ್ಟ್ ಹಿನ್ನಡೆ ನೀಡಿತ್ತು. ಪ್ರಕರಣ ದಾಖಲಾಗುವ ಮೊದಲುವೇ ನಿರೀಕ್ಷಣಾ ಜಾಮೀನು ನೀಡಿರುವ ಕ್ರಮವನ್ನು ಪ್ರಶ್ನಿಸಿ ಸಂತ್ರಸ್ತ ಬಾಲಕನ ತಾಯಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣ ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ನೀಡಿರುವುದು ಸರಿಯಾದ ಕ್ರಮವಲ್ಲ ಎಂದು ಆ ಜಾಮೀನನ್ನು ರದ್ದುಪಡಿಸಿತ್ತು.
ಆದರೆ ರೆಗ್ಯುಲರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಲು ಮೂರು ವಾರಗಳ ಕಾಲಾವಕಾಶ ನೀಡಿದ್ದ ನ್ಯಾಯಾಲಯ, ಆ ಅವಧಿಯವರೆಗೆ ನಿರೀಕ್ಷಣಾ ಜಾಮೀನಿನ ರಕ್ಷಣೆಯನ್ನು ಮುಂದುವರಿಸಲು ಸೂಚಿಸಿತ್ತು.

ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್ನಿಂದ ಜಾಮೀನು
ಈಗ ವಿಶೇಷ ಪೋಕ್ಸೋ ನ್ಯಾಯಾಲಯ ರೆಗ್ಯುಲರ್ ಜಾಮೀನು ಮಂಜೂರು ಮಾಡಿರುವುದರಿಂದ, ಪ್ರಕರಣದ ಮುಂದಿನ ವಿಚಾರಣೆ ನ್ಯಾಯಾಲಯದಲ್ಲಿ ಮುಂದುವರಿಯಲಿದೆ.
ಆರೋಪಗಳ ಕುರಿತು ಅಂತಿಮ ತೀರ್ಪು ನ್ಯಾಯಾಂಗ ಪ್ರಕ್ರಿಯೆಯ ಬಳಿಕವೇ ಹೊರಬೀಳಲಿದೆ.
ಇದನ್ನು ನೋಡಿ : TIRUPATIಗೆ ಹೋಗುವವರಿಗೆ GOOD NEWS – ಮೊದಲ ಆರತಿ ಬೆಳಗುವ ಹಕ್ಕು ರಾಜ್ಯಕ್ಕೆ




