
STING OPERATION ಕೇಸ್ಗೆ ಹೈಕಮಾಂಡ್ ಎಂಟ್ರಿ! ಸಿದ್ದುಗೆ ಡ್ಯಾಮೇಜ್.. ಪಕ್ಷಕ್ಕೆ ಎಫೆಕ್ಟ್!
ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ಕೇಸ್ ಹೊಸ ಸಂಚಲನ ಸೃಷ್ಟಿಸಿದೆ. ಇಷ್ಟು ದಿನದಿಂದ ಮೌನಕ್ಕೆ ಜಾರಿದ್ದ ಮಾಜಿ ಸಿಎಂ ಸಿದ್ದು ನಿನ್ನೆ ತಾನೇ ಸ್ಟಿಂಗ್ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ರು.
ಸ್ಟಿಂಗ್ ಆಪರೇಷನ್ ಕೇಸ್ಗೆ ಹೈಕಮಾಂಡ್ ಎಂಟ್ರಿ
ಇದೀಗ ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಕೋಲಾಹಲ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಎಂಟ್ರಿ ಕೊಟ್ಟಿದೆ. ದೆಹಲಿಯಲ್ಲಿ ಸಿಎಂ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಜೊತೆಗೆ ಸುದೀರ್ಘವಾಗಿ ಚರ್ಚೆ ನಡೆಸಿದ ಹೈಕಮಾಂಡ್ ನಾಯಕರು ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ, ಪ್ರಕರಣವನ್ನು ನಿಭಾಯಿಸಿದ ರೀತಿಯ ಬಗ್ಗೆ ಅಸಮಾಧಾನ ಹೊರಹಾಕಿದೆ ಎಂಬ ಮಾಹಿತಿ ಇದೆ.

ಮಾಜಿ ಸಿಎಂ ಸಿದ್ದರಾಮಯ್ಯ ಕುರಿತಾಗಿ ಮಾಡಲಾಗಿದೆ ಎಂಬ ಸ್ಟಿಂಗ್ ಆಪರೇಷನ್ ಕೋಲಾಹಲವನ್ನೇ ಸೃಷ್ಟಿ ಮಾಡಿತ್ತು. ಈ ಕುರಿತಾಗಿ ಸಿದ್ದರಾಮಯ್ಯ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಅಲ್ಲದೆ, ಸ್ಟಿಂಗ್ ಆಪರೇಷನ್ ವಿಡಿಯೋ ಮೂಲಕ ವರ್ಚಸ್ಸಿಗೆ ಧಕ್ಕೆ ತರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ರು.
READ THIS : ಸ್ಟಿಂಗ್ ಆಪರೇಷನ್ ಕೋಲಾಹಲ – ಸಿದ್ದರಾಮಯ್ಯ ಮೌನವೇಕೆ?
ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ
ಇನ್ನೊಂದೆಡೆ ಸ್ಟಿಂಗ್ ಪ್ರಕರಣವನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದೆ. ಅದರಲ್ಲೂ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಸ್ಟಿಂಗ್ ಆಪರೇಷನ್ ಹಿಂದೆ ಸಿಎಂ ಡಿಕೆ ಶಿವಕುಮಾರ್ ಇದ್ದಾರೆ ಎಂಬ ಆರೋಪವನ್ನು ಮಾಡುತ್ತಿದ್ದಾರೆ. ಆದರೆ, ಇದನ್ನು ಕಾಂಗ್ರೆಸ್ ನಾಯಕರು ನಿರಾಕರಿಸಿದ್ದಾರೆ.

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಇದ್ಯಾ?
ಈ ಬೆಳವಣಿಗೆಯ ಬೆನ್ನಲ್ಲೇ ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಇದೆ ಎಂದು ಬಿಂಬಿಸುವ ಪ್ರಯತ್ನಗಳು ನಡೆಯುತ್ತಿವೆ. ಈ ಎಲ್ಲಾ ಬೆಳವಣಿಗೆಗಳು ಸಹಜವಾಗಿ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ. ರಾಷ್ಟ್ರ ಮಟ್ಟದಲ್ಲಿ ಚರ್ಚೆ ಆಗಿರುವುದರಿಂದ ಹೈಕಮಾಂಡ್ ಗಮನ ಸೆಳೆದಿದೆ.
ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಡೆ ಏನು
ಹೀಗಾಗಿ ಗುರುವಾರ ಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಈ ಸಂದರ್ಭದಲ್ಲಿ ಪ್ರಕರಣದ ಬಗ್ಗೆ ಹೈಕಮಾಂಡ್ ನಾಯಕರು ಸುದೀರ್ಘವಾಗಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಒಟ್ಟಿನಲ್ಲಿ, ಸ್ಟಿಂಗ್ ಆಪರೇಷನ್ ಪ್ರಕರಣ ಈಗ ದೆಹಲಿ ಅಂಗಳ ತಲುಪಿದ್ದು, ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಡೆ ಏನು ಅನ್ನೋ ಕುತೂಹಲ ಮೂಡಿಸಿದೆ.

MUST WATCH : ಜೈಲು ಸೇರಿದ್ರು ದರ್ಶನ್ಗಿಲ್ಲ ನೆಮ್ಮದಿ ಪತ್ನಿ – ಶಿಷ್ಯನ ಮಧ್ಯೆ ಬೀದಿ ಜಗಳ



