
ಪಟ್ಟನಾಯಕನಹಳ್ಳಿ ಪೊಲೀಸರು ಬಂಧಿತ ಆರೋಪಿಯಿಂದ 1.45 ಲಕ್ಷ ಮೌಲ್ಯದ ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡಿದ್ದಾರೆ.ತುಮಕೂರು
ಶಿರಾ:
ಶಿರಾ ತಾಲೂಕಿನ ಚಂಗಾವರ ಗ್ರಾಮದ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪಟ್ಟನಾಯಕನಹಳ್ಳಿ ಪೊಲೀಸರು ಬಂಧಿಸಿ, ಕಳ್ಳತನ ಮಾಡಿದ್ದ ಖದೀಮನಿಂದ 1.45 ಲಕ್ಷ ಮೌಲ್ಯದ ಚಿನ್ನದ ಒಡವೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ದರೋಡೆ ಕಳ್ಳತನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಹೌದು ತಾಲೂಕಿನ ಚಂಗಾವರ ಗ್ರಾಮದ ಸಿದ್ದಲಿಂಗಮ್ಮ ಎಂಬುವರ ಮನೆಗೆ ನುಗ್ಗಿದ್ದ ಕಳ್ಳರು ಬೀರುವಿನಲ್ಲಿದ್ದ ಇಪ್ಪತ್ತು ಸಾವಿರ ನಗದು ಹಾಗೂ ಕೋಣೆಯಲ್ಲಿ ಪಾತ್ರೆಯ ಕೆಳಗಿಟ್ಟಿದ್ದ 4 ಗ್ರಾಂ ತೂಕದ ಮಾಟಿ, 12 ಗ್ರಾಂನ ಮಾಂಗಲ್ಯ ಸರ ಕದ್ದಿದ್ದ ಪಾವಗಡ ತಾಲೂಕಿನ ಯರಪಾಳ್ಯ ಗ್ರಾಮದ ಜಿ. ಶ್ರೀನಿವಾಸ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿ, ಆತನಿಂದ 1.45 ಲಕ್ಷ ಮೌಲ್ಯದ ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು ಪ್ರಕರಣ ದಾಖಲಿಸಿಕೊಂಡ ಪಟ್ಟನಾಯಕನಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.