ಹಾಸನ:
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಾಟ ಹೆಚ್ಚಾಗಿದೆ. ಈ ಮೈಕ್ರೋ ಫೈನಾನ್ಸ್ ಅನ್ನೋ ಭೂತ ಬಡಜನರನ್ನ ಕಿತ್ತು ತಿಂತಾ ಇದೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಾಟಕ್ಕೆ ಬೇಸೆತ್ತು ಅದೇಷ್ಟೋ ಮಂದಿ ತಮ್ಮ ಪ್ರಾಣವನ್ನೇ ಕಳೆದುಕೊಳ್ತಿದ್ದಾರೆ. ಮೈಕ್ರೋ ಫೈನಾನ್ಸ್ಗಳಿಗೆ ಮೂಗುದಾರ ಹಾಕಲು ಸರ್ಕಾರ ಸುಗ್ರೀವಾಜ್ಞೆ ಜಾರಿ ತಂದಿದ್ದರು ಕೂಡ ಕೆಲ ಮೈಕ್ರೋ ಫೈನಾನ್ಸ್ಏಜೆಂಟ್ಗಳು ಸಾಮಾನ್ಯ ಜನರ ಮೇಲೆ ದರ್ಪ ತೋರುತ್ತಲೇ ಇದ್ಧಾರೆ.
ಈಗಾಗಲೇ ಮೈಕ್ರೋ ಫೈನಾನ್ಸ್ಕಾಟಕ್ಕೆ ಅಮಾಯಕ ಜೀವಗಳು ಬಲಿಯಾಗಿವೆ, ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಹೆದರಿ ಓರ್ವ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಹಾಸನಜಿಲ್ಲೆ ಆಲೂರು ತಾಲೂಕಿನ ಹಳ್ಳಿಯೂರು ಗಾಮದಲ್ಲಿ ನಡೆದಿದೆ. ಗ್ರಾಮದ ಕೆಂಚಮ್ಮ [50] ಎಂಬ ಮಹಿಳೆ ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.