ವಿಜಯಪುರ:
ಆಟವಾಡುತ್ತಿದ್ದ ಮಗು ತೆರೆದ ಬಾವಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ಇನ್ನು ಈ ದುರ್ಘಟನೆ ಶುಕ್ರವಾರ ಸಂಭವಿಸಿದ್ದು, ಮೃತಪಟ್ಟ ಮಗುವನ್ನು ಹರ್ಷಿತ್ ಪಾಟೀಲ್ [3] ಎಂದು ಗುರುತಿಸಲಾಗಿದೆ. ಶುಕ್ರವಾರ ಮಗು ಮನೆಯಿಂದ ನಾಪತ್ತೆಯಾಗಿದ್ದು, ಮಗು ಎಲ್ಲಿದೆ ಎನ್ನುವ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ಕಂಗಾಲಾದ ಕುಟುಂಬಸ್ಥರು ಹರ್ಷಿತ್ ಹುಡುಕಾಟದಲ್ಲಿ ತೊಡಗಿದ್ದರು. ಇಂದು ಬೆಳಿಗ್ಗೆ ಸ್ಥಳೀಯರು ಬಾವಿಯಲ್ಲಿ ಇಳಿದು ನೋಡಿದಾಗ ಮಗುವಿನ ಮೃತದೇಹ ಪತ್ತೆಯಾಗಿದೆ. ಮಗುವು ಆಟವಾಡುತ್ತಿದ್ದಾಗ ದಾರಿ ತಪ್ಪಿ ಬಾವಿಗೆ ಬಿದ್ದಿರಬಹುದೆಂದು ಶಂಕಿಸಲಾಗಿದೆ. ಇನ್ನು ಈ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.