CHIKKABALLAPURA NEWS : ಅಲಹಾಬಾದ್ ನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಬ್ಲೂ ಡಾಟ್ ಕೊರಿಯರ್ ಗೆ ಸೇರಿದ ಗೂಡ್ಸ್ ವಾಹನಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿಗೆ ಹೊತ್ತಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ಅಗಲಗುರ್ಕಿ ಬೈಪಾಸ್ ರಸ್ತೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಇನ್ನು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಹೊತ್ತು ಸಾಗುತ್ತಿದ್ದ ಗೂಡ್ಸ್ ವಾಹನದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ನೋಡು ನೋಡುತ್ತಿದ್ದಂತೆ ನಡುರಸ್ತೆಯಲ್ಲಿಯೇ ಧಗಧಗೆನೆ ಹೊತ್ತಿ ಉರಿದಿದೆ. ಚಾಲಕ ಬೆಂಕಿ ಹತ್ತಿಕೊಂಡಿರುವುದನ್ನು ಗಮನಿಸಿ ಗಾಡಿ ನಿಲ್ಲಿಸಿದ್ದಾರೆ. ಇತ್ತ ಬೆಂಕಿಯ ಕೆನ್ನಾಲಿಗೆಗೆ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಬೆಲೆಬಾಳುವ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.
ಇತ್ತ ಗೂಡ್ಸ್ ವಾಹನ ನಡುರಸ್ತೆಯಲ್ಲಿಯೇ ನಿಂತುಕೊಂಡಿದ್ದರಿಂದ ಹೆದ್ದಾರಿಯಲ್ಲಿ ಕೆಲಕಾಲ ವಾಹನಗಳು ಮುಂದೆ ಸಂಚರಿಸಲಾಗದೆ ಟ್ರಾಫಿಕ್ ಜಾಮ್ ಉಂಟಾಯಿತು. ಇನ್ನು ವಿಷಯ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದಾವಿಸಿದರು. ಸುಮಾರು 6 ಗಂಟೆಗಳ ಕಾಳ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದರು. ಹರಸಾಹಸಪಟ್ಟು ಗೂಡ್ಸ್ ಗಾಡಿಯ ಬೆಂಕಿನಂದಿಸುವಲ್ಲಿ ಯಶಸ್ವಿಯಾದ್ರು. ಇನ್ನು ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.
ಇನ್ನು ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ, 6 ಗಂಟೆಗಳ ಕಾಲ ನಿರಂತರವಾಗಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಘಟನೆಯ ವೇಳೆ ಯಾವುದೇ ಪ್ರಾಣಹಾನಿ ಸಂಭವಿಸದಿರುವುದು ಭಾಗ್ಯಶಾಲಿ ಅಂಶವಾಗಿದೆ.