ಹಾಸನ : ಸಕಲೇಶಪುರದಲ್ಲಿ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ

ಹಾಸನ : ಹಾಸನ ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರೆದಿದ್ದು, ಸಕಲೇಶಪುರ ತಾಲೂಕಿನಲ್ಲಿ ಭಾರಿ ಮಳೆ ವಾಹನ ಸಂಚಾರಕ್ಕೆ ತೊಂದರೆ ಉಂಟುಮಾಡಿದೆ. ತೀವ್ರ ಮಳೆಯ ಪರಿಣಾಮ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ ಅಪಘಾತ ಒಂದು ಆತಂಕ ಮೂಡಿಸಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಮೀನು ಸಾಗಿಸುತ್ತಿದ್ದ ಲಾರಿ, ಸಕಲೇಶಪುರದ ರಾಟೆಮನೆ ಬಳಿಯ ರಸ್ತೆಯಲ್ಲಿ ಮಳೆಯ ಕಾರಣದಿಂದ  ರಸ್ತೆ ಕಾಣದೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ತಕ್ಷಣ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೂ ಕರೆದೊಯ್ಯಲಾಯಿತು.

ಇನ್ನು ಘಟನಾ ಸ್ಥಳಕ್ಕೆ ತಕ್ಷಣವೇ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಅನಾಹುತವನ್ನು ತಪ್ಪಿಸಲು ಕ್ರಮಕೈಗೊಂಡಿದ್ದಾರೆ. ಈ ಮಧ್ಯೆ, ಅಪಘಾತದ ಪರಿಣಾಮ ಕೆಲ ಸಮಯ ವಾಹನ ಸಂಚಾರಕ್ಕೆ ಅಡ್ಡಿಯಾಯಿತು.

 

Author:

...
Keerthana J

Copy Editor

prajashakthi tv

share
No Reviews