ಅಭಿವೃದ್ದೀ ವಿಚಾರವಾಗಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಗ್ರಾಮಸ್ಥರ ನಡುವೆ ಜಟಾಪಡಿ ಶುರುವಾಗಿದೆ. ಹೌದು ಶಿರಾ ತಾಲೂಕಿನ ಭುವನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಈ ಗಲಾಟೆ ನಡೆದಿದ್ದು, ಸೋಶಿಯಲ್ ಮಿಡಿಯಾದಲ್ಲಿ ಫುಲ್ ವೈರಲ್ ಆಗಿದೆ. ಹೌದು ಶಿರಾ ತಾಲೂಕಿನ ಭುವನಹಳ್ಳಿ, ಗೊಲ್ಲರಹಟ್ಟಿ ಗ್ರಾಮಗಳ ಅಭಿವೃದ್ಧಿ ವಿಚಾರವಾಗಿ ಗ್ರಾಮಸ್ಥರು ಹಾಗೂ ಪಂಚಾಯ್ತಿ ಸದಸ್ಯರ ನಡುವೆ ಮಾತು ಶುರುವಾಗಿದ್ದು, ಗೊಲ್ಲರಹಟ್ಟಿ ಗ್ರಾಮದ ಅಭಿವೃದ್ದಿಗೆ ಗ್ರಾಮ ಪಂಚಾಯ್ತಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಆಕ್ರೋಶ ಹೊರಹಾಕಿದ್ರು.
ಇನ್ನು ಅಭಿವೃದ್ದಿ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ರು ಅಧಿಕಾರಿಗಳು ಸ್ಪಂದಿಸುತ್ತಿಲ್ಲ.. ವಿದ್ಯುತ್ ದೀಪ ಸೇರಿದಂತೆ ಮೂಲಭೂತ ಸೌಕರ್ಯ ಇಲ್ಲ, ವಾಟರ್ ಮ್ಯಾನ್ ನೀರು ಬಿಡುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ರು. ಈ ನಡುವೆ ಗ್ರಾಮಸ್ಥರು ಪಿಡಿಓ ಮತ್ತು ವಾಟರ್ ಮ್ಯಾನ್ ನಡುವೆ ಜಟಾಪಟಿ ಶುರುವಾಗಿದ್ದು, ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಫುಲ್ ವೈರಲಾ ಆಗ್ತಿದೆ.