ವಿಜಯಪುರ : ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ಭೀಕರ ಅಪಘಾತ | ಬೈಕ್ ಸವಾರ ದುರ್ಮರಣ

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಇಂದು  ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಈ ಘಟನೆ ಮುದ್ದೇಬಿಹಾಳ ತಾಲ್ಲೂಕಿನ ಅಲಮಟ್ಟಿ ರಸ್ತೆಯ ಮಾದಿನಾಳ ಕ್ರಾಸ್ ಬಳಿ ಈಶ್ವರಿ ಫಾರ್ಮ್ ಹೌಸ್ ಸಮೀಪ ನಡೆದಿದೆ. ಇನ್ನು ಅಪಘಾತದಲ್ಲಿ ಮೃತಪಟ್ಟವನನ್ನು ಚಿರ್ಚನಕಲ್ ಗ್ರಾಮದ ಧರ್ಮಣ್ಣ ಚೌಧರಿ (ಅವಿವಾಹಿತ) ಎಂದು ಗುರುತಿಸಲಾಗಿದೆ.

ಧರ್ಮಣ್ಣ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದರು ವೇಳೆ, ಬಾಲಕೋಟೆಯಿಂದ ಮುದ್ದೇಬಿಹಾಳದ ಕಡೆಗೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಅತಿವೇಗದಲ್ಲಿ ಬೈಕ್‌ ಎದುರಿನಿಂದ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಅವರು ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಘಟನೆ ಬಗ್ಗೆ ಮಾಹಿತಿ ಪಡೆದ ಮುದ್ದೇಬಿಹಾಳ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ, ವಾಹನ ಸಂಚಾರ ಸುಗಮಗೊಳಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಪೊಲೀಸರು ಈ ಸಂಬಂಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

 

Author:

...
Keerthana J

Copy Editor

prajashakthi tv

share
No Reviews