ABD VILLIERSಕ್ರಿಕೆಟ್
ಸಿಡಿಲಬ್ಬರದ ಸಿಡಿಲಮರಿ ಎಬಿ ಡಿವಿಲಿಯರ್ಸ್ ಕ್ರಿಕೆಟ್ ಅಂಗಳಕ್ಕೆ ಮರಳುವ ಸೂಚನೆ ನೀಡಿದ್ದಾರೆ. 2021 ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿರುವ ಎಬಿಡಿ ಇದೀಗ ಮತ್ತೆ ಕ್ರಿಕೆಟ್ ಆಡಬೇಕೆಂಬ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮತ್ತೆ ಕ್ರಿಕೆಟ್ ಅಂಗಳಕ್ಕೆ ಮರಳುವ ಸೂಚನೆಯನ್ನು ಸಹ ನೀಡಿದ್ದಾರೆ.
ರನ್ನಿಂಗ್ ಬಿಟ್ವೀನ್ ದಿ ವಿಕೆಟ್ಸ್ನ ಸಂದರ್ಶನದಲ್ಲಿ ಮಾತನಾಡಿದ ಡಿವಿಲಿಯರ್ಸ್, ನಾನು ಮತ್ತೆ ಕ್ರಿಕೆಟ್ ಅಂಗಳಕ್ಕೆ ಮರಳಬಹುದು. ಏಕೆಂದರೆ ನನ್ನ ಮಕ್ಕಳು ನಾನು ಆಡಬೇಕೆಂದು ಒತ್ತಡ ಹೇರುತ್ತಿರುತ್ತಾರೆ. ಅವರಿಗಾಗಿ ನಾನು ಮತ್ತೆ ಕ್ರಿಕೆಟ್ ಆಡಬೇಕೆಂದಿರುವೆ ಎಂದು ತಿಳಿಸಿದ್ದಾರೆ.ಈ ಹಿಂದೆ ಎಬಿಡಿ ಡಿವಿಲಿಯರ್ಸ್ ಕಣ್ಣು ದೃಷ್ಟಿ ಸಮಸ್ಯೆಯ ಕಾರಣ ದಿಢೀರ್ ನಿವೃತ್ತಿ ಘೋಷಿಸಿದ್ದರು. ಈ ಬಗ್ಗೆ ಮಾತನಾಡಿದ ಎಬಿಡಿ, ನನ್ನ ಎಡಗಣ್ಣು ಸ್ವಲ್ಪ ಮಸುಕಾಗಿದ್ದರೂ, ಈಗ ಬಲಗಣ್ಣು ಪ್ರಬಲವಾಗಿದೆ. ಹೀಗಾಗಿ ಚೆಂಡನ್ನು ಚೆನ್ನಾಗಿ ಗುರುತಿಸಬಲ್ಲೆ ಎಂದು ತಿಳಿಸಿದ್ದಾರೆ.
RCB ತಂಡದ ಆಪತ್ಭಾಂಧವರಾಗಿದ್ದ ಎಬಿ ಡಿವಿಲಿಯರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 157 ಪಂದ್ಯಗಳಾಡಿದ್ದಾರೆ. ಈ ವೇಳೆ ಒಟ್ಟು 4522 ರನ್ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಹೊಂದಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಬಳಿಕ ಆರ್ಸಿಬಿ ಪರ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಬ್ಯಾಟರ್ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ.