ತುಮಕೂರು: ತುಮಕೂರು- ಬೆಂಗಳೂರು ಹೈವೇಯಲ್ಲಿ ಅಪಘಾತ

ತುಮಕೂರಿನ ಕ್ಯಾತ್ಸಂದ್ರ ಬಳಿಯ ನಂದಿಹಳ್ಳಿ ಬಳಿ KSRTC ಬಸ್‌ ಹಾಗೂ ಕಂಟೈನರ್‌ ಲಾರಿ ನಡುವೆ ಅಪಘಾತವಾಗಿರುವುದು.
ತುಮಕೂರಿನ ಕ್ಯಾತ್ಸಂದ್ರ ಬಳಿಯ ನಂದಿಹಳ್ಳಿ ಬಳಿ KSRTC ಬಸ್‌ ಹಾಗೂ ಕಂಟೈನರ್‌ ಲಾರಿ ನಡುವೆ ಅಪಘಾತವಾಗಿರುವುದು.
ತುಮಕೂರು

ತುಮಕೂರು:

ಕಂಟೈನರ್‌ ಲಾರಿಗೆ ಹಿಂಬದಿಯಿಂದ KSRTC ಬಸ್‌ ಡಿಕ್ಕಿಯಾಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರಾಗಿದ್ದಾರೆ. ತುಮಕೂರಿನ ಕ್ಯಾತ್ಸಂದ್ರ ಬಳಿಯ ನಂದಿ ಹಳ್ಳಿ ಬಳಿ ಈ ಅಪಘಾತ ನಡೆದಿದ್ದು, ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.  ಬೆಂಗಳೂರು ಕಡೆಯಿಂದ ತುಮಕೂರು ಮಾರ್ಗವಾಗಿ ಹೊಸದುರ್ಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ನಂದಿಹಳ್ಳಿ ಬಳಿ ಕಂಟೈನರ್‌ ಲಾರಿ ಸಡನ್‌ ಬ್ರೇಕ್‌ ಹಾಕಿದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಬಸ್‌ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂ ಆಗಿದೆ.

ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕನಿಗೆ ಕಾಲು ಮುರಿದಿದ್ದು, ಬಸ್‌ ಚಾಲಕ ಹಾಗೂ ಗರ್ಭಿಣಿ ಸೇರಿದಂತೆ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು ಘಟನಾ ಸ್ಥಳಕ್ಕೆ ಕ್ಯಾತ್ಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.

Author:

share
No Reviews