ಚಿಕ್ಕಬಳ್ಳಾಪುರ : ನಿವೇಶನ ವಿಚಾರಕ್ಕೆ ಜಗಳ ನಡೆದು ವ್ಯಕ್ತಿಯ ಬರ್ಬರ ಹತ್ಯೆ | ಆರೋಪಿ ಪರಾರಿ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಭೂಮಿಶೆಟ್ಟಿಹಳ್ಳಿ ಗ್ರಾಮದಲ್ಲಿ ಸೈಟ್‌ ವಿಚಾರಕ್ಕೆ ಇಬ್ಬರ ನಡುವೆ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.

ಭೂಮಿಶೆಟ್ಟಿಹಳ್ಳಿ ಗ್ರಾಮದ ನಿವಾಸಿ ಶಿವಶಂಕರ್‌ (35) ಎಂಬಾತ ಕೊಲೆಯಾದ ದುರ್ದೈವಿಯಾಗಿದ್ದಾರೆ. ನರೇಶ್‌ ಎಂಬಾತ ಕೊಲೆ ಮಾಡಿದ ಆರೋಪಿ, ಇಬ್ಬರು ಸಂಬಂಧಿಕರಾಗಿದ್ದು, ಸೈಟ್‌ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದಿದ್ದು, ಜಗಳ ತಾರಕಕ್ಕೇರಿ ಮಾರಕಾಸ್ತ್ರಗಳಿಂದ ನರೇಶ್‌ ಶಿವಶಂಕರ್‌ ಹೊಟ್ಟೆ ಭಾಗಕ್ಕೆ ತಿವಿದಿದ್ದಾನೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಶಿವಶಂಕರ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೊಲೆ ಮಾಡಿದ ನಂತರ ಆರೋಪಿ ನರೇಶ್ ಸ್ಥಳದಿಂದ ಪರಾರಿಯಾಗಿದ್ದು, ಕೆಂಚಾರ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಮೃತದೇಹವನ್ನು ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಸದ್ಯ ಪ್ರಕರಣ ಸಂಬಂಧ ತನಿಖೆ ಮುಂದುವರಿಸಲಾಗಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews