MOVIE: ಡಾಕ್ಟರೇಟ್ ಪದವಿ ಪಡೆದ ನಟಿ ಮೇಘನಾ ಗಾವಂಕರ್

ಚಾರ್‌ಮಿನಾರ್‌, ಛೂ ಮಂಥರ್‌ ಸೇರಿದಂತೆ ಕನ್ನಡದ ಅನೇಕ ಚಿತ್ರಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಮೇಘನಾ ಗಾಂವ್ಕರ್‌ ಅವರಿಗೆ ಡಾಕ್ಟರೇಟ್‌ ಪದವಿ ದೊರೆತಿದೆ. ಸಿನಿಮಾ ಮತ್ತು ಸಾಹಿತ್ಯ ವಿಚಾರದಲ್ಲಿ ಮೇಘನಾ ಗಾಂವ್ಕರ್‌ ಡಾಕ್ಟರೇಟ್‌ ಪದವಿ ಪಡೆದಿದ್ದು, ಈ ಹೆಮ್ಮೆಯ ವಿಚಾರವನ್ನು ತಮ್ಮ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

ನಟಿ ಮೇಘನಾ ಗಾಂವ್ಕರ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದು, 6 ವರ್ಷಗಳ ಸತತ ಶ್ರಮಕ್ಕೆ ಇದೀಗ ಫಲ ಸಿಕ್ಕಿದೆ. ಮುಂಬೈ ವಿಶ್ವವಿದ್ಯಾಲಯದಲ್ಲಿ ಸಿನಿಮಾ ಮತ್ತು ಸಾಹಿತ್ಯ ವಿಷಯದಲ್ಲಿ ನಟಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಈ ಸಂಭ್ರಮವನ್ನು ಮೇಘನಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ತಾವು ಪಿಎಚ್‌ಡಿ ಮಾಡಿದ ಜರ್ನಿ ಬಗ್ಗೆ ಮೇಘನಾ ಮಾತನಾಡಿ, ಇವತ್ತು ನಾನು ನಿಮ್ಮೆಲ್ಲರ ಜೊತೆ ಹೆಮ್ಮೆಯ ವಿಚಾರವನ್ನು ಹಂಚಿಕೊಳ್ಳುತ್ತಿದ್ದೇನೆ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಕಳೆದ 6 ವರ್ಷಗಳಿಂದ ನಾನು ನನ್ನ ಪಿಎಚ್‌ಡಿ ಮಾಡುತ್ತಿದ್ದೆ. 2024ರ ಅಕ್ಟೋಬರ್‌ನಲ್ಲಿ ನಾನು ನನ್ನ ಪಿಎಚ್‌ಡಿ ವರದಿಯನ್ನು ಯಶಸ್ವಿಯಾಗಿ ಸಲ್ಲಿಸಿದ್ದೆ. ಕಳೆದ ವಾರ ನನ್ನ ವೈವಾ ಕೂಡ ಆಯ್ತು. ಇವತ್ತು ನಾನು ನನ್ನ ಡಾಕ್ಟರೇಟ್ ಪದವಿಯನ್ನು ಹೆಮ್ಮೆಯಿಂದ ಸ್ವೀಕರಿಸಿದ್ದೇನೆ. ಇದು ತುಂಬಾ ವಿಶೇಷವಾದದ್ದು. ಯಾಕೆಂದರೆ ಈ ಪಿಎಚ್‌ಡಿ ಪಯಣ ಅಷ್ಟು ಸುಲಭ ಆಗಿರಲಿಲ್ಲ ಎಂದಿದ್ದಾರೆ.

 

Author:

...
Sub Editor

ManyaSoft Admin

share
No Reviews