ಖ್ಯಾತ ನಟಿ ಶುಭ ಪೂಂಜಾ ಅವರ ತಾಯಿ ವಿಧಿವಶರಾಗಿದ್ದಾರೆ. ನ್ಯುಮೋನಿಯಾ ಕಾಯಿಲೆಯಿಂದ ಬಳಲುತ್ತಿದ್ದ ಶುಭಪೂಂಜಾ ತಾಯಿ ಅವರ ಶ್ವಾಸಕೋಶದಲ್ಲಿ ನೀರು ತುಂಬಿದ್ದ ಕಾರಣ ಆರೋಗ್ಯದಲ್ಲಿ ಏರುಪೇರಾಗಿತ್ತು ಎನ್ನಲಾಗಿದೆ.ಕಳೆದ ನಾಲ್ಕು ತಿಂಗಳಿನಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಶುಭ ಅವರ ತಾಯಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ನನ್ನ ಅಮ್ಮನ್ನನ್ನು ನಾನು ಕಳೆದುಕೊಂಡಿದ್ದೇನೆ ಎಂದು ಶುಭಾ ಪೂಂಜಾ ಅವರು ಪೋಸ್ಟ್ ಹಾಕಿದ್ದು, ಅಮ್ಮನ ಪ್ರೀತಿ, ಸವಿನೆನಪಿಗೆ ಭಾವಕರಾಗಿದ್ದಾರೆ. ನೀನು ನನ್ನ ಯಾಕೆ ಬಿಟ್ಟು ಹೋದೆ? ನನ್ನ ಇಡೀ ಜೀವನಕ್ಕೆ ಅರ್ಥವಿಲ್ಲದೆ ಆಯ್ತು. ನನ್ನ ಇಡೀ ಜೀವನವೇ ನೀನಾಗಿದ್ದೆ. ನನ್ನ ಯಾಕೆ ಬಿಟ್ಟು ಹೋದೆ’ ಎಂದು ಇನ್ಸ್ಟಾಗ್ರಾಮ್ನಲ್ಲಿ ಶುಭಾ ಪೂಂಜಾ ಬರೆದುಕೊಂಡಿದ್ದಾರೆ. 70ನೇ ವಯಸ್ಸಿಗೆ ಶುಭಾ ಪೂಜಾ ತಾಯಿ ನಿಧನರಾಗಿದ್ದಾರೆ.