ಶಿರಾ :
ಶಿರಾ ನಗರದಲ್ಲಿ ತಾಲೂಕು ಆಡಳಿತ ವತಿಯಿಂದ ಆಡಳಿತ ಸೌದ ಕಚೇರಿಯಲ್ಲಿ ಅಗ್ನಿಬನ್ನಿರಾಯ ಸ್ವಾಮಿ ಜಯಂತಿ ಆಚರಿಸಲಾಯಿತು. ಈ ವೇಳೆ ಕಂದಾಯ ಇಲಾಖೆ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳ ತಿಗಳ ಸಮುದಾಯದ ಮುಖಂಡರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇನ್ನು ಕಚೇರಿ ಸಭಾಂಗಣದಲ್ಲಿ ತಿಗಳ ಸಮುದಾಯದ ಸಾಂಸ್ಕೃತಿಕ ವೀರ ಅಗ್ನಿಬನ್ನಿರಾಯ ಸ್ವಾಮಿಯ ಭಾವಚಿತ್ರಕ್ಕೆ ತಹಶೀಲ್ದಾರ್ ಗ್ರೇಡ್ 2 ನ ನಾಗರಾಜ್ ಪೂಜೆ ಸಲ್ಲಿಸಿ ಪುಷ್ಪ ಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ತಹಶೀಲ್ದಾರ್ ನಾಗರಾಜ್ ಭಾರತೀಯ ಪರಂಪರೆಗೆ ವಿಶೇಷವಾದ ಕೊಡುಗೆಯನ್ನು ನೀಡಿದ ಮಹನೀಯರಲ್ಲಿ ಇವರು ಕೂಡ ಒಬ್ಬರಾಗಿದ್ದು, ಕೇವಲ ಒಂದು ಜನಾಂಗಕ್ಕೆ ಸೀಮಿತವಾಗಿರದೆ ಮಾನವ ಜನಾಂಗದ ಏಳಿಗೆಗೆ ಬಹಳಷ್ಟು ಶ್ರಮಿಸಿದ್ದಾರೆ. ಇಂತಹ ಮಹನೀಯರ ಜಯಂತಿಯನ್ನು ಆಚರಿಸ್ತಿರೋದು ಅರ್ಥಪೂರ್ಣವಾಗಿದೆ ಎಂದು ತಿಳಿಸಿದರು.