ತುಮಕೂರು : ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಎಐಎಂಐಎಂ ಜಿಲ್ಲಾಧ್ಯಕ್ಷ ಕಿಡಿ

ಎಐಎಂಐಎಂ ತುಮಕೂರು ಜಿಲ್ಲಾಧ್ಯಕ್ಷ ಸೈಯದ್ ಬುರ್ಹಾನುದ್ದೀನ್
ಎಐಎಂಐಎಂ ತುಮಕೂರು ಜಿಲ್ಲಾಧ್ಯಕ್ಷ ಸೈಯದ್ ಬುರ್ಹಾನುದ್ದೀನ್
ತುಮಕೂರು

ತುಮಕೂರು :

ಸಂಸತ್‌ ನಲ್ಲಿ ವಕ್ಫ್ ತಿದ್ದುಪಡಿ 2024 ಮಸೂದೆಯನ್ನು ಮಂಡಿಸಲಾಗಿದ್ದು, ಈ ಮಸೂದೆ ಸಂವಿಧಾನ ವಿರೋಧಿಯಾಗಿದೆ. ಸಮುದಾಯದ ಹಕ್ಕುಗಳಿಗೆ ಧಕ್ಕೆ ತರುವಂತಿದೆ ಎಂದು ಎಐಎಂಐಎಂ ತುಮಕೂರು ಜಿಲ್ಲಾಧ್ಯಕ್ಷ ಸೈಯದ್ ಬುರ್ಹಾನುದ್ದೀನ್ ಅವರು ಆರೋಪಿಸಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆ ಭಾರತದ ಸಂವಿಧಾನದ ಮೇಲಿನ ದಾಳಿಯಾಗಿದೆ. ಅಲ್ಲದೇ ಮುಸ್ಲಿಮರ ಹಕ್ಕುಗಳನ್ನು ಕಿತ್ತುಕೊಳ್ಳುವುದು ಕೇಂದ್ರ ಸರ್ಕಾರದ ಹುನ್ನಾರವಾಗಿದೆ. ಭಾರತೀಯ ಸಮಾಜವನ್ನು ವಿಭಜಿಸುವ ಗುರಿ ಹೊಂದಿದ್ದರಿಂದ 2024ರ ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕದೆ ರದ್ದುಗೊಳಿಸುವಂತೆ ಒತ್ತಾಯಿಸಿದರು. ಇನ್ನು  ಇಸ್ಲಾಂ ಕಾನೂನಿನ್ವಯ ವಕ್ಫ್ ಎಂದರೆ ಧಾರ್ಮಿಕ ಮತ್ತು ದತ್ತಿ ಉದ್ದೇಶಗಳಿಗಾಗಿ ದೇವರ ಹೆಸರಿನಲ್ಲಿ ಅರ್ಪಿಸಲಾದ ಆಸ್ತಿ ಎಂದರು .  ವಕ್ಫ್ ಆದಾಯವನ್ನು ಮಸೀದಿಗಳ ನಿರ್ವಹಣೆ, ಸಮುದಾಯದ ಬಡ ಜನರ ಅಭಿವೃದ್ಧಿಗೆ ಬಳಸಲಾಗುತ್ತದೆ ಎಂದು ಹೇಳಿದರು.

ಮುಸ್ಲಿಂ ಮಹಿಳೆಯರ ಮತ್ತು  ಬಡ ಮುಸಲ್ಮಾನರಿಗಾಗಿ ಈ ತಿದ್ದುಪಡಿ ಎನ್ನುವವರ ಪಕ್ಷದಲ್ಲಿ ಒಂದು ಮಹಿಳೆ ಸಂಸದೆ ಕೂಡಾ ಇಲ್ಲಾ, ಅಲ್ಲದೇ ಬಡ ಮುಸಲ್ಮಾನರಿಗೆ ಜಾತ್ರೆ ದೇವಸ್ಥಾನ ಮುಗಟ್ಟುಗಳಲ್ಲಿ ವ್ಯಾಪಾರ ವಹಿವಾಟು ನಡೆಸಲು ವಿರೋಧಿಸುವವರು ಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಮಾತನಾಡುತ್ತಿರುವುದು ಯಾವ ಹುನ್ನಾರ ಎಂದು ತಿಳಿಯಬೇಕು ಎಂದಿದ್ದಾರೆ.

ಅಲ್ಪಸಂಖ್ಯಾತರ ಹಕ್ಕುಗಳನ್ನು ಹತ್ತಿಕ್ಕುವುದು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಸೂಚಿ ಭಾಗವಾಗಿದೆ. ಇನ್ನು ದೇಶದ ಸುಮಾರು 20 ಕೋಟಿ ಮುಸ್ಲಿಮರು ವಕ್ಫ್ ತಿದ್ದುಪಡಿ ವಿಧೇಯಕ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವಾಗ ಅವರ ಅಹವಾಲು ಆಲಿಸದೆ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಿರುವುದು ಪ್ರಜಾಪ್ರಭುತ್ವಕ್ಕೆ ಎಸಗಿದ ದ್ರೋಹವಾಗಿದೆ ಎಂದರು.

 

 

 

Author:

share
No Reviews