ಮಂಡ್ಯ: ಐರಾವತ ಬಸ್ ಡಿಕ್ಕಿ | ನುಜ್ಜು ಗುಜ್ಜಾದ ಕಾರು

ಮಂಡ್ಯ: 

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಡಿಕ್ಕಿಯಾದ ಪರಿಣಾಮ ಕಾರು ನಜ್ಜುಗುಜ್ಜಾಗಿ ನಾಲ್ಕು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭೀಕರ ಅಪಘಾತ ಮಂಡ್ಯ ತಾಲ್ಲೂಕು ತೂಬಿನಕೆರೆ ಎಕ್ಸಿಟ್ ಬಳಿ ನಡೆದಿದೆ. ಕಾರು ಮೈಸೂರು ಕಡೆಗೆ ಹೊರಟಿತ್ತು. ಈ ವೇಳೆ ಎಕ್ಸ್ಪ್ರೆಸ್‌ವೇನಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲ ಉಂಟಾಗಿದ್ದು, ಮತ್ತೆ ಕಾರನ್ನು ಎಕ್ಸ್ಪ್ರೆಸ್ ವೇಗೆ ತಿರುಗಿಸಿದ್ದಾನೆ.

ಇದೇ ವೇಳೆ ಹಿಂದಿನಿಂದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಬಂದಿದ್ದು, ಎದುರಿಗೆ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.  ಇನ್ನು ಈ ಘಟನೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ  ನಡೆದಿದೆ.

 

Author:

share
No Reviews