ಆಂಧ್ರಪ್ರದೇಶ : ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ | ಕರ್ನಾಟಕದ ಮೂವರ ದುರ್ಮರಣ

ಆಂಧ್ರ ಪ್ರದೇಶ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಉರುಳಿ ಬಿದ್ದು ಭೀಕರ ಅಪಘಾತ ಸಂಭವಿಸಿದ್ದು, ಕರ್ನಾಟಕದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿ ಲೊಕೇಶ್ (34), ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಚಲಪತಿ, ಹಾಗೂ ಚಂದನಹಳ್ಳಿ ಗ್ರಾಮದ ಶಿವಾನಂದ ಎಂಬುವರು ಮೃತ ದುರ್ದೈವಿಗಳಾಗಿದ್ದಾರೆ.

ಇನ್ನು ಮೃತರು ಅಡುಗೆ ಕೆಲಸಕ್ಕಾಗಿ ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆಯ ಪಕ್ಕದ ಆಳವಾದ ಬಾವಿಗೆ ಉರುಳಿದ್ದು ಈ ಅಪಘಾತ ಸಂಭವಿಸಿದೆ. ಇನ್ನು ಘಟನೆಯಲ್ಲಿ ಮೂವರು ಸಾವನ್ನಪಿದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಬಾವಿ ಆಳವಾಗಿದ್ದ ಕಾರಣ ಮೊದಲು ಸ್ಥಳೀಯರು ಅಗ್ಗಗಳನ್ನು ಬಳಸಿ ಕಾರನ್ನು ಮೇಲಕ್ಕೆ ಎತ್ತಲು ಪ್ರಯತ್ನಿಸಿದ್ದು, ಮೇಲೆತ್ತಲಾಗದೆ ಬಳಿಕ ಪೊಲೀಸರು ಹಾಗೂ ಸ್ಥಳೀಯರ ಸಹಕಾರದಿಂದ ಕ್ರೇನ್‌ ಮೂಲಕ ಕಾರನ್ನು ಮೇಲೆತ್ತಲಾಯಿತು.

ಸದ್ಯ ಘಟನೆ ಸಂಬಂಧ ಪಿಲೇರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews