ಗುಬ್ಬಿ : ಕೊಡಗೀಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಅನಿತಾ ಶ್ರೀನಿವಾಸ್ ಅವಿರೋಧ ಆಯ್ಕೆ..!

ಗುಬ್ಬಿ :

ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಎಸ್‌.ಕೊಡಗೀಹಳ್ಳಿ ಗ್ರಾಮ ಪಂಚಾಯ್ತಿ  ಉಪಾಧ್ಯಕ್ಷರಾಗಿ ಅನಿತಾ ಶ್ರೀನಿವಾಸ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಉಪಾಧ್ಯಕ್ಷರಾಗಿದ್ದ ರಂಗರಾಜು ರಾಜೀನಾಮೆ ನೀಡಿದ್ದರಿಂದ ಸ್ಥಾನ ತೆರವಾಗಿತ್ತು. ಸಾಮಾನ್ಯ ಮೀಸಲು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಏಕೈಕ ಅಭ್ಯರ್ಥಿಯಾಗಿ ಕಾಳೇನಹಳ್ಳಿ ಸದಸ್ಯೆ ಅನಿತಾ ಶ್ರೀನಿವಾಸ್‌ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ  ಅನಿತಾ ಅವರನ್ನೇ ಅವಿರೋಧವಾಗಿ ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ಇನ್ನು ಅವಿರೋಧವಾಗಿ ಅನಿತಾ ಶ್ರೀನಿವಾಸ್‌ ಆಯ್ಕೆಯಾಗುತ್ತಿದ್ದಂತೆ ಬೆಂಬಲಿಗರು ಹಾರ ಹಾಕಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುರಿಗೇನಹಳ್ಳಿ ತುಳಸಿ ದಾಸ್ ಸೇರಿದಂತೆ ಸದಸ್ಯರಾದ ಗಂಗನರಸಮ್ಮ, ಜಯಮ್ಮ, ವೆಂಕಟಲಕ್ಷ್ಮಮ್ಮ ಸೇರಿ ಹಲವರು ಉಪಸ್ಥಿತರಿದ್ದರು. ಅನಿತಾ ಶ್ರೀನಿವಾಸ್ ಮಾತನಾಡಿ ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಅಧ್ಯಕ್ಷರ ಜೊತೆ ಸೇರಿ ಎಲ್ಲಾ ಸದಸ್ಯರ ವಿಶ್ವಾಸ ಗಳಿಸಿ ಕೆಲಸ ಮಾಡುತ್ತೇನೆ ಹಾಗೂ ಅಭಿವೃದ್ದಿ ವಿಚಾರದಲ್ಲಿ ಮಾದರಿ ಗ್ರಾಮ ಪಂಚಾಯಿತಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

 

Author:

share
No Reviews