ಶಿವಮೊಗ್ಗ : ರಾಜ್ಯದಲ್ಲಿ ಮತ್ತೋರ್ವ ಬಾಣಂತಿ ಸಾವು..!

ಮೃತ ಮಹಿಳೆ ಮಂಜುಳಾ
ಮೃತ ಮಹಿಳೆ ಮಂಜುಳಾ
ಶಿವಮೊಗ್ಗ

ಶಿವಮೊಗ್ಗ:

ರಾಜ್ಯದಲ್ಲಿ ಇತ್ತೀಚೆಗೆ ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚಾಗಿಯೇ ಬೆಳಕಿಗೆ ಬರುತ್ತಿರುವುದನ್ನು ಕಾಣಬಹುದು. ಇದೀಗ ಶಿವಮೊಗ್ಗದಲ್ಲೂ ಕೂಡ ಇಂತದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಆರು ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಾಳೂರು ಗ್ರಾಮದ 25 ವರ್ಷ ವಯಸ್ಸಿನ ಮೃತ ಮಂಜುಳಾ  ಎಂಬ ಮಹಿಳೆಯು ಫೆ.10 ರಂದು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯ ನಂತರ ಆರೋಗ್ಯದಲ್ಲಿ ಏರುಪೇರಾದ ಕಾರಣ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು,  ಆದರೆ ಇಂದು ಆರು ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಬಾಣಂತಿ ಮಂಜುಳಾ ಸಾವನ್ನಪ್ಪಿದ್ದಾರೆ.

ಒಂದು ವರ್ಷದ ಹಿಂದಷ್ಟೇ ಮಂಜುಳಾ ಅವರಿಗೆ ಮದುವೆಯಾಗಿದ್ದು. ಸದ್ಯ  ಮೃತ ಮಂಜುಳಾ ಅವರ ಸಾವಿನ ಸುದ್ದಿ ಕೇಳಿ ಆಸ್ಪತ್ರೆಯ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

 

Author:

...
Editor

ManyaSoft Admin

Ads in Post
share
No Reviews