MILK RATE HIKE: ಮತ್ತೊಂದು ಏರಿಕೆ ಶಾಕ್‌ | ನಂದಿನಿ ಹಾಲಿನ ದರ 4 ರೂ. ಹೆಚ್ಚಳ

ರಾಜ್ಯ: 

ಬಸ್, ಮೆಟ್ರೋ ದರ ಏರಿಕೆ ಬಳಿಕ ಇದೀಗ ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡುವ ಮೂಲಕ ರಾಜ್ಯದ ಜನತೆಗೆ ದೊಡ್ಡ ಶಾಕ್‌ ಕೊಟ್ಟಿದೆ. ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ರಾಜ್ಯದ ಜನತೆಗೆ ದರ ಏರಿಕೆಯ ಬಿಸಿ ಮುಟ್ಟಿಸಿದೆ. ಪ್ರತಿ ಲೀಟರ್‌ ನಂದಿನಿ ಹಾಲಿನ ದರ 4 ರೂ. ಹೆಚ್ಚಳ ಮಾಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ನಾಳೆಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.

ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ನಿರಂತರವಾಗಿ ಬೇಡಿಕೆ ಹೆಚ್ಚಿದ ಹಿನ್ನಲೆ ಪ್ರತಿ ಲೀಟರ್‌ ಹಾಲಿನ ದರ 4ರೂ ಹೆಚ್ಚ್ಳ ಮಾಡಲಾಗಿದೆ. ಈ ಮೂಲಕ ರೈತರು ಹಾಗೂ ಹಾಲು ಒಕ್ಕೂಟಗಳ ಮನವಿಯನ್ನು ರಾಜ್ಯ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಇದೇ ಪೆಬ್ರವರಿಯಲ್ಲಿ ಪ್ರತಿ ಲೀಟರ್‌ ಹಾಲಿಗೆ 2 ರೂ ಏರಿಕೆ ಮಾಡಲಾಗಿತ್ತು. ಇದೀಗ ಪ್ರತಿ ಲೀಟರ್‌ ಹಾಲಿಗೆ ಬರೋಬ್ಬರಿ ನಾಲ್ಕು ರೂಪಾಯಿ ಏರಿಕೆ ಮಾಡಲಾಗಿದ್ದು, ಈಗಾಗಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಹೋಗಿದ್ದ ರಾಜ್ಯದ ಜನರಿಗೆ ಹಾಲಿನ ದರ ಏರಿಕೆ ಮಾಡುವ ಮೂಲಕ ಮತ್ತೆ ಬೆಲೆ ಏರಿಕೆಯ ಬರೆ ಹಾಕಿದೆ.

 

Author:

...
Sub Editor

ManyaSoft Admin

share
No Reviews