ಬೆಳಗಾವಿ : ರಾಜ್ಯದಲ್ಲಿ ಕೊರೊನಾ ಮಹಾಮಾರಿಗೆ ಮತ್ತೊಂದು ಬಲಿ ...!

ಬೆಳಗಾವಿ : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಳಗಾವಿಯಲ್ಲಿ 70 ವರ್ಷದ ರೋಗಿಯೊಬ್ಬರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಇದೀಗ ರಾಜ್ಯದಲ್ಲಿ ಕೊರೊನಾ ಮಾಹಾಮಾರಿಗೆ ಮೃತಪಟ್ಟವರ ಸಂಖ್ಯೆ 2 ಕ್ಕೆ ಏರಿದೆ.

ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಈ ರೋಗಿಗೆ ಕೊರೊನಾ ಟೆಸ್ಟ್‌ ಮಾಡಿಸಿದಾಗ ಪಾಸಿಟಿವ್‌ ಪತ್ತೆಯಾಗಿತ್ತು. ಕೂಡಲೇ ಅವರನ್ನು ಬಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಕೋವಿಡ್‌ ವಾರ್ಡ್‌ ಗೆ ಶಿಫ್ಟ್‌ ಮಾಡಲಾಗಿತ್ತು. ಇದರ ಜೊತೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು  ತಡರಾತ್ರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇನ್ನು ನಿನ್ನೆ ರಾತ್ರಿಯೇ ಕೋವಿಡ್‌ ನಿಯಮದ ಪ್ರಕಾರ ಕುಟುಂಬಸ್ಥರು ಅಂತ್ಯಸಂಸ್ಕಾರ ಮಾಡಿದ್ದಾರೆ.

ಇನ್ನು ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣ ಮತ್ತೆ ಸದ್ದು ಮಾಡುತ್ತಿರುವುದರಿಂದ ಉಸಿರಾಟದ ಸಮಸ್ಯೆ ಹಾಗೂ ಹೃದಯಸಂಬಂಧಿ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್​ ಟೆಸ್ಟ್​ ಮಾಡುವಂತೆ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ, ಅಲ್ಲದೇ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

 

 

Author:

...
Sushmitha N

Copy Editor

prajashakthi tv

share
No Reviews