ತುಮಕೂರಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಹಾವಳಿ ಸಾಲಗಾರರ ಕಿರುಕುಳಕ್ಕೆ ಮತ್ತೊಂದು ಬಲಿ

ತಿಪಟೂರು ಬೋವಿ ಪಾಳ್ಯ
ತಿಪಟೂರು ಬೋವಿ ಪಾಳ್ಯ
ತುಮಕೂರು

ತುಮಕೂರು ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್‌ನವರ ಕಿರುಕುಳ ತಾಳಲಾರದೇ ಮಹಿಳೆಯೊಬ್ಬರು ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ವರ್ಷ ಮೈಕ್ರೋ ಫೈನಾನ್ಸ್‌ ಮತ್ತು ಮೀಟರ್‌ಬಡ್ಡಿ ದಂಧೆಕೋರರ ಕಿರುಕುಳದಿಂದಾಗಿ ಒಂದೇ ಕುಟುಂಬದ ಐವರು ನೇಣಿಗೆ ಶರಣಾಗಿದ್ದ ಘಟನೆ ತುಮಕೂರು ನಗರದಲ್ಲಿ ನಡೆದಿತ್ತು. ಇದೀಗ ಇಂಥದ್ದೇ ಮತ್ತೊಂದು ಘಟನೆ ತುಮಕೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಭೋವಿ ಕಾಲೋನಿಯ ೪೨ ವರ್ಷದ ಸಾದೀಕ್‌ಬೇಗಂ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಈಕೆ ಮೈಕ್ರೋ ಫೈನಾನ್ಸ್‌ಸಂಸ್ಥೆಗಳಲ್ಲಿ ೨ ಲಕ್ಷಕ್ಕೂ ಹೆಚ್ಚು ಸಾಲವನ್ನು    ಮಾಡಿಕೊಂಡಿದ್ದು ಈ ಸಾಲವನ್ನು ತೀರಿಸುವಂತೆ ಮೈಕ್ರೋ ಫೈನಾನ್ಸ್‌ನವರು ನಿರಂತರ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಹೀಗಾಗಿ ನೊಂದ ಮಹಿಳೆ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಾದಿಕ್‌ಬೇಗಂ ಆತ್ಮಹತ್ಯೆಗೆ ಶರಣಾಗೋದಕ್ಕೂ ಮುನ್ನ ವಿಡಿಯೋ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳೋದಕ್ಕೆ ಕಾರಣ ಏನು ಎಂಬುದನ್ನು ಎಳೆಎಳೆಯಾಗಿ ವಿವರಿಸಿದ್ದಾರೆ. ತಾನು ೨ ಲಕ್ಷ ಸಾಲ ಮಾಡಿಕೊಂಡಿದ್ದ ಬಗ್ಗೆ ಮೈಕ್ರೋ ಫೈನಾನ್ಸ್‌ನವರು ಕೊಟ್ಟ ಕಿರುಕುಳದ ಬಗ್ಗೆ ಎಲ್ಲವನ್ನು ಕೂಡ ಹೇಳಿಕೊಂಡಿದ್ದಾರೆ.

ಘಟನೆ ಸಂಬಂಧ ತಿಪಟೂರಿನ ಕೆ.ಬಿ.ಕ್ರಾಸ್‌ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author:

share
No Reviews