BANGALORE : ನೀವು ರಾಜ್ಯದ ಮುಖ್ಯಮಂತ್ರಿಗಳೋ ವಿಧಾನಸೌಧ ಮೆಟ್ಟಿಲುಗಳ ಮುಖ್ಯಮಂತ್ರಿಗಳೋ | ಸಿದ್ದರಾಮಯ್ಯಗೆ HDK ಟಾಂಗ್

BANGALORE NEWS : ವಿಧಾನಸೌಧದ ಮೆಟ್ಟಿಲುಗಳಲ್ಲಿ ನಡೆದ ವಿಜಯೋತ್ಸವಕ್ಕೂ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೂ ಸಂಬಂಧವಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಸಮಾಜ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಕುಮಾರಸ್ವಾಮಿ, "ಸಿದ್ದರಾಮಯ್ಯನವರೇ, ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧದ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ?" ಎಂದು ಪ್ರಶ್ನೆ ಮಾಡಿದ್ದಾರೆ.

ವಿಧಾನಸೌಧ ಮೆಟ್ಟಿಲು ಮೇಲೆ ಸರ್ಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಸನ್ಮಾನ್ಯ ಸಿದ್ದರಾಮಯ್ಯನವರೇ.. ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!? ದಯವಿಟ್ಟು ಹೇಳುವಿರಾ? ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ ‘ಕೈ’ ತೊಳೆದುಕೊಳ್ಳುವುದು ಎಷ್ಟು ಸರಿ? ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ? ಮೆಟ್ಟಿಲು ಮುಖ್ಯಮಂತ್ರಿ ಅಂತ ವಾಗ್ದಾಳಿ ನಡೆಸಿದ್ದಾರೆ.

 

Author:

...
Keerthana J

Copy Editor

prajashakthi tv

share
No Reviews